ಬಿಹಾರ : ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು ಹಿಂದೆ ಸರಿದಿದ್ದಾರೆ. ಈ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂಜಯ್ ಕರೋಲ್‌ಗೆ ವಿಚಾರಣೆ ನಡೆಸಬೇಕಿತ್ತು. ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಮಧ್ಯಂತರ ತಡೆ ನೀಡಿರುವ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಹಿಂದೆ ಸರಿಯಲು ಕಾರಣವೇನು?:ನ್ಯಾಯಮೂರ್ತಿ ಕರೋಲ್ ಅವರು ಈ ಹಿಂದೆ ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು, ನಂತರ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಹೀಗಾಗಿ ತಾವು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಕರೋಲ್ ಸ್ಪಷ್ಟಪಡಿಸಿದ್ದಾರೆ
2023ರ ಜನವರಿಯಲ್ಲಿ, ನ್ಯಾಯಮೂರ್ತಿ ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಜಾತಿ ಗಣತಿಯನ್ನು ಪ್ರಾರಂಭಿಸುವ ರಾಜ್ಯದ ನಿರ್ಧಾರವನ್ನು ಪ್ರಶ್ನಿಸಿ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಲು ನಿರಾಕರಿಸಿತ್ತು. ಆದರೆ ಈ ಸಂಬಂಧ ನೀವು ನಿಮ್ಮದೇ ರಾಜ್ಯದ ಹೈಕೋರ್ಟ್ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿ ಪ್ರಶ್ನೆ ಮಾಡಬಹುದು ಎಂದು ಹೇಳಿತ್ತು.
ಇದನ್ನೂ ಓದಿ:ಜಾತಿ ಜನಗಣತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್.. ನಾಳೆ ಮಧ್ಯಂತರ ಆದೇಶ