ವಾರಾಣಸಿ(ಉತ್ತರಪ್ರದೇಶ): ಜ್ಞಾನವಾಪಿ ಕ್ಯಾಂಪಸ್‌ನ ವಾಜು ಸ್ಥಳದಲ್ಲಿ ಪತ್ತೆಯಾದ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಇತರ ಅಪರಿಚಿತ ವ್ಯಕ್ತಿಗಳನ್ನು ಇಂದು ವಿಚಾರಣೆಗೆ ಒಳಪಡಿಸಲಾಗುತ್ತದೆ. ಈ ಕುರಿತ ವಿಚಾರಣೆ ಇಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ.
ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಸಂಬಂಧ ವಕೀಲ ಹರಿಶಂಕರ್ ಪಾಂಡೆ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮತ್ತು ಅಂಜುಮನ್ ಅರೇಂಜ್ಮೆಂಟ್ ಮಸೀದಿ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಇಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ 2000 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲು ಅವರು ಅರ್ಜಿಯಲ್ಲಿ ಒತ್ತಾಯಿಸಿದ್ದರು.