ಕುಶಿನಗರ: ಜಿಲ್ಲೆಯ ಕಪ್ತಂಗಂಜ್ ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ನಾಲ್ವರ ಸಾವು, ಹಲವರಿಗೆ ಗಾಯ - explosion of cracker factory in kushinagar
ಉತ್ತರಪ್ರದೇಶದ ಕುಶಿನಗರದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 4 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.
![ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ನಾಲ್ವರ ಸಾವು, ಹಲವರಿಗೆ ಗಾಯ explosion of cracker factory in kushinagar](https://etvbharatimages.akamaized.net/etvbharat/prod-images/768-512-9424057-thumbnail-3x2-th.jpg)
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ
ಭಾರೀ ಸ್ಫೋಟದಿಂದಾಗಿ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಕಾರ್ಖಾನೆಯನ್ನು ನಡೆಸುತ್ತಿದ್ದರು. ಕಪ್ತಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಿದ್ದಾರೆ.