ಶಿಮ್ಲಾ(ಹಿಮಾಚಲ ಪ್ರದೇಶ):ಹಿಮಾಚಲ ಪ್ರದೇಶದ ಕಿನ್ನೌರ್ನಲ್ಲಿ ದೊಡ್ಡ ಪ್ರಮಾಣದ ಭೂ ಕುಸಿತ ಉಂಟಾಗಿದ್ದು, ಸರ್ಕಾರಿ ಬಸ್ ಸೇರಿದಂತೆ ಅನೇಕ ವಾಹನಗಳ ಮೇಲೆ ಮಣ್ಣು ಹಾಗೂ ಕಲ್ಲಿನ ಅವಶೇಷಗಳು ಬಿದ್ದಿರುವ ಪರಿಣಾಮ 40ಕ್ಕೂ ಹೆಚ್ಚು ಜನರು ಅದರಡಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಸ್ಥಳದಲ್ಲಿ ಇದೀಗ ಭರದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಸಾವನ್ನಪ್ಪಿರುವ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಭಕ್ತಾಧಿಗಳನ್ನ ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್ ಹಾಗೂ ಇತರ ವಾಹನಗಳ ಮೇಲೆ ದಿಢೀರ್ ಭೂಕುಸಿತವಾಗಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಿನ್ನೌರಿನ ನಾಲ್ಕು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಇದರಿಂದ ಅನೇಕ ವಾಹನಗಳು ತೊಂದರೆಗೊಳಗಾಗಿವೆ. ಭೂಕುಸಿತದಿಂದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ ಬಸ್ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ಬಸ್ ಕಿನ್ನೌರಿನ ರೆಕಾಂಗ್ ಪಿಯೊದಿಂದ ಶಿಮ್ಲಾಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ.
ಇಲ್ಲಿಯವರೆಗೆ ಡ್ರೈವರ್ ಸೇರಿದಂತೆ ಇಬ್ಬ ರಕ್ಷಣೆ ಮಾಡಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. NDRF ಸಿಬ್ಬಂದಿ ಸ್ಥಳಕ್ಕೆ ತೆರಳಿದೆ. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜಯರಾಮ್ ಠಾಕೂರ್ ಜೊತೆ ಮಾತನಾಡಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಹಾಗೂ ಸ್ಥಳೀಯ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ.
ಮಾಹಿತಿ ಪಡೆದುಕೊಂಡ ನಮೋ