ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ವರುಣ ಅವಾಂತರವನ್ನೇ ಸೃಷ್ಟಿಸಿದ್ದು, ರಾಯಗಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 42 ತಲುಪಿದೆ. ಕಳೆದ 48 ಗಂಟೆಗಳಿಂದ ರತ್ನಗಿರಿ ಜಿಲ್ಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಸತಾರ, ಕೋಲ್ಹಾಪುರ್, ಸಾಂಗ್ಲಿ ಹಾಗೂ ಕೊಂಕಣ್ ಜಿಲ್ಲೆಯ ಕರಾವಳಿಯಲ್ಲಿ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಮುಂಜಾಗ್ರತಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಿಗೆ ದೌಡಾಯಿಸಿರುವ ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ. ಎಡಬಿಡದೆ ಮಳೆಯಾಗುತ್ತಿರುವ ಸತಾರ ಜಿಲ್ಲೆಯ ಪಟಾನ್‌ನ ಮಿರ್ಗಾಂವ್ ಗ್ರಾಮದಲ್ಲಿ 221 ಮಂದಿಯನ್ನು ಈಗಾಗಲೇ ಎನ್‌ಡಿಆರ್‌ಎಫ್ ರಕ್ಷಿಸಿದೆ.
ರಾಜ್ಯದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಬಗ್ಗೆ ಕಂಬನಿ ಮಿಡಿದಿರುವ ಸಿಎಂ ಉದ್ಧವ್ ಠಾಕ್ರೆ, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಕಚೇರಿ ತಿಳಿಸಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮೃತರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದರು.
ಇದನ್ನೂ ಓದಿ: Maharashtra ಮಳೆಗೆ ತತ್ತರ: ಪರಿಸ್ಥಿತಿ ಬಗ್ಗೆ ಸಿಎಂ ಠಾಕ್ರೆ ಜೊತೆ ಪ್ರಧಾನಿ ಮೋದಿ ಚರ್ಚೆ