ಚೆನ್ನೈ(ತಮಿಳುನಾಡು):ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಅಕಾಲಿಕ ಮಳೆ ಸುರಿಯುತ್ತಿದೆ. ಹೀಗಾಗಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ ದೂರ ಕಾರೈಕಲ್ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಟ್ವೀಟ್ ಮಾಡಿ, ಬಂಗಾಳಕೊಲ್ಲಿಯಲ್ಲಿ ವಾಯುಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು.
ತಿರುವರೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ವೇಗದ ಬಿರುಗಾಳಿ ಬೀಸುತ್ತಿದೆ. ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.