ಕರ್ನಾಟಕ

karnataka

By

Published : May 3, 2022, 8:31 PM IST

ETV Bharat / bharat

ಕೇರಳ, ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ.. ರಾಜ್ಯದಲ್ಲಿ 4 ದಿನ ಯೆಲ್ಲೋ ಅಲರ್ಟ್​ ಘೋಷಣೆ

ಬಂಗಾಳಕೊಲ್ಲಿ ಉಂಟಾದ ಸುಳಿಗಾಳಿಯಿಂದ ಈಶಾನ್ಯ ರಾಜ್ಯಗಳು, ಕೇರಳ, ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

heavy-raining
ಯೆಲ್ಲೋ ಅಲರ್ಟ್

ಬೆಂಗಳೂರು/ನವದೆಹಲಿ:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಈಶಾನ್ಯ ರಾಜ್ಯಗಳು, ಬಿಹಾರ, ಜಾರ್ಖಂಡ್, ಕೇರಳದಲ್ಲಿ ಮಳೆಯಾಗಿದೆ. ಅಲ್ಲದೇ ಇನ್ನೂ ಮೂರು ದಿನ ಚದುರಿದ, ಭಾರೀ ಮಳೆಯ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಭಾರಿ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.

ಇದಲ್ಲದೇ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಬಿಹಾರ, ಅರುಣಾಚಲ ಪ್ರದೇಶ, ಅಸ್ಸೋಂ , ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಕರಾವಳಿ ಆಂಧ್ರ ಪ್ರದೇಶದಲ್ಲಿ 40 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ. ಮುಂದಿನ 2 ದಿನಗಳಲ್ಲಿ ಗುಡುಗು, ಮಿಂಚು, ಗಾಳಿ ಸಮೇತ ಇನ್ನಷ್ಟು ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.

ರಾಜ್ಯದಲ್ಲಿ 4 ದಿನ ಯೆಲ್ಲೋ ಅಲರ್ಟ್​:ಇನ್ನು ರಾಜ್ಯದ ಹಲವೆಡೆಯೂ ಭಾರೀ ಮಳೆಯಾಗಿದೆ. ಮುಂದಿನ 4 ದಿನ ಕೂಡ ಇದೇ ರೀತಿ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 6ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ. ಕೋಲಾರ ಹೊರತುಪಡಿಸಿದ ಉಳಿದ ಜಿಲ್ಲೆಗಳಲ್ಲಿ ತಾಪಮಾನದಲ್ಲೂ ತುಸು ಇಳಿಕೆ ಕಂಡಿದೆ. ಗರಿಷ್ಠ ತಾಪಮಾನದಲ್ಲಿ ರಾಯಚೂರು 42 ಡಿಗ್ರಿ ಸೆಲ್ಸಿಯಸ್, ಬೀದರ್ 41, ಕೊಪ್ಪಳ 40, ಕೆಜಿಎಫ್ 42.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಓದಿ:ಕೋಮು ಸೌಹಾರ್ದತೆ ಕದಡುವವರ ಮುಂದೆ ತಲೆಬಾಗುವುದಿಲ್ಲ: ಸಿಎಂ ದೀದಿ ಗುಡುಗು

ABOUT THE AUTHOR

...view details