ಕರ್ನಾಟಕ

karnataka

ETV Bharat / bharat

ಇಂದು ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - ಇಂದು ತಮಿಳುನಾಡಿನಲ್ಲಿ ಭಾರೀ ಮಳೆ

ಚೆನ್ನೈ ಮತ್ತು ತಮಿಳುನಾಡಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು, ಅದರಂತೆ ನಗರದಲ್ಲಿ ಭಾರೀ ಮಳೆಯಾಗಿದ್ದು, ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ.

ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
ತಮಿಳುನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

By

Published : Sep 6, 2021, 1:19 PM IST

ಚೆನ್ನೈ:ಚೆನ್ನೈ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಪ್ರಾದೇಶಿಕ ಹವಾಮಾನ ಕೇಂದ್ರವು ತನ್ನ ವರದಿಯಲ್ಲಿ ಈ ಪ್ರದೇಶದಲ್ಲಿ ನಿರ್ಮಿಸಿರುವ ಚಂಡಮಾರುತದ ಪರಿಚಲನೆ ವ್ಯವಸ್ಥೆಯಿಂದಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಇಂದು ಮೋಡ ಕವಿದ ವಾತಾವರಣವಿದ್ದು, ಚೆನ್ನೈನ ಕೆಲವು ಪ್ರದೇಶಗಳಲ್ಲಿ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ತಿಳಿಸಿದೆ. ಬಂಗಾಳ ಕೊಲ್ಲಿ ವಾಯುಬಾರ ಕುಸಿತದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಚೆನ್ನೈ ಮತ್ತು ತಮಿಳುನಾಡಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಈ ಮೊದಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು, ಅದರಂತೆ ನಗರದಲ್ಲಿ ಭಾರಿ ಮಳೆಯಾಗಿದ್ದು, ಚೆನ್ನೈ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ.

ನಗರ ಪ್ರದೇಶಗಳು ಮತ್ತು ದಕ್ಷಿಣ ಉಪನಗರಗಳಲ್ಲಿ ಭಾನುವಾರ ಗರಿಷ್ಠ ಮಳೆಯಾಗಿದೆ ಮತ್ತು ಸೋಮವಾರ ಹವಾಮಾನ ತಜ್ಞರ ಮುನ್ಸೂಚನೆಯು ಪ್ರಕಾರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮತ್ತು ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : ಪ್ರಯಾಣಿಕರ ಅನುಕೂಲಕ್ಕೆ ಕಾಯ್ದಿರಿಸದ ಟಿಕೆಟ್​ ಸೌಲಭ್ಯ ಒದಗಿಸಿದ ರೈಲ್ವೆ ಸಚಿವಾಲಯ

For All Latest Updates

ABOUT THE AUTHOR

...view details