ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾಗಿರುವ ಅನಾಹುತಕ್ಕೆ ಕೆಟ್ಟ ಆಡಳಿತ, ಅತಿ ಹೆಚ್ಚು ಭ್ರಷ್ಟಾಚಾರ ಮತ್ತು ನಗರ ಸುಧಾರಣೆಗಳ ಕೊರತೆ ಕಾರಣ ಎಂದು ಐಟಿ ದಿಗ್ಗಜ ಹಾಗೂ ಉದ್ಯಮಿ ಮೋಹನ್ ದಾಸ್ ಪೈ ಆರೋಪಿಸಿದ್ದಾರೆ.
ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಇಬ್ಬರೂ ಕೂಡಿಕೊಂಡು ಬೆಂಗಳೂರು ನಾಗರಿಕರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಐಟಿ ಪ್ರಮುಖ ಹಾಗೂ ಇನ್ಫೋಸಿಸ್ ಲಿಮಿಟೆಡ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಆಗಿದ್ದ ಮೋಹನ್ ದಾಸ್ ಪೈ ಗರಂ ಆಗಿದ್ದಾರೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಸಿಲಿಕಾನ್ ಸಿಟಿ ಕೆರೆಯಂತಾಗಿ ಪರಿಣಮಿಸಿದೆ. ಈ ಪರಿಸ್ಥಿತಿ ನೋಡಿ ಪೈ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.