ಕರ್ನಾಟಕ

karnataka

ETV Bharat / bharat

ಟಿಆರ್​ಎಸ್​ ಶಾಸಕರ ಖರೀದಿ ಆರೋಪ ಪ್ರಕರಣ: ಬಿಎಲ್ ಸಂತೋಷ್‌ಗೆ ಜಾರಿಯಾಗಿದ್ದ ನೋಟಿಸ್‌ಗೆ ಹೈಕೋರ್ಟ್​ ತಡೆ - BJP National General Secretary Neta BL Santosh

ತೆಲಂಗಾಣದ ಟಿಆರ್​ಎಸ್​ ಶಾಸಕರ ಖರೀದಿ ಆರೋಪ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ ಅವರಿಗೆ ಎಸ್​ಐಟಿ ಜಾರಿ ಮಾಡಿದ್ದ ನೋಟಿಸ್‌ಗೆ ಡಿಸೆಂಬರ್​ 5ರವೆರೆಗೆ ತಡೆ ನೀಡಿ ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದೆ.

high-court-stays-sit-notices-to-bjp-leader-bl-santosh
ಟಿಆರ್​ಎಸ್​ ಶಾಸಕರ ಖರೀದಿ ಆರೋಪ ಪ್ರಕರಣ: ಬಿಎಲ್ ಸಂತೋಷ್‌ಗೆ ಜಾರಿಯಾಗಿದ್ದ ನೋಟಿಸ್‌ಗೆ ಹೈಕೋರ್ಟ್​ ತಡೆ

By

Published : Nov 25, 2022, 9:25 PM IST

ಹೈದರಾಬಾದ್​ (ತೆಲಂಗಾಣ): ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ ಅವರಿಗೆ ವಿಶೇಷ ತನಿಖಾ ತಂಡ (ಎಸ್​ಐಟಿ)ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ತೆಲಂಗಾಣದ ಆಡಳಿತಾರೂಢ ಟಿಆರ್​ಎಸ್​ ಶಾಸಕರ ಖರೀದಿ ಯತ್ನ ಆರೋಪದ ಮೇಲೆ ಅಕ್ಟೋಬರ್​ 26ರಂದು ಹೈದರಾಬಾದ್ ಸಮೀಪದ ಮೊಯಿನಾಬಾದ್‌ನಲ್ಲಿರುವ ಫಾರ್ಮ್‌ಹೌಸ್‌ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳ ಸಂಭಾಷಣೆಯಲ್ಲಿ ಬಿಎಲ್ ಸಂತೋಷ್‌ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯ ಎಸ್​ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಬಿಎಲ್ ಸಂತೋಷ್‌ ಅವರಿಗೆ ಎರಡು ಬಾರಿ ನೋಟಿಸ್​ ಜಾರಿ ಮಾಡಿದ್ದರು.

ಹೈಕೋರ್ಟ್ ಮೆಟ್ಟಿಲೇರಿದ್ದ ಬಿಎಲ್ ಸಂತೋಷ್: ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್ ರದ್ದುಗೊಳಿಸುವಂತೆ ಬಿಎಲ್ ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಲ್ಲದಿದ್ದರೂ ಎಸ್‌ಐಟಿ ಅಧಿಕಾರಿಗಳು ದುರುದ್ದೇಶಪೂರ್ವಕವಾಗಿ ನೋಟಿಸ್ ಕಳುಹಿಸುತ್ತಿದ್ದಾರೆ.

ಎಸ್‌ಐಟಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸಂತೋಷ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಇಂದು ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಎಸ್​ಐಟಿ ನೋಟಿಸ್‌ಗೆ ಡಿಸೆಂಬರ್​ 5ರವೆರೆಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ.

ಇದನ್ನೂ ಓದಿ:ಟಿಆರ್​ಎಸ್​ ಶಾಸಕರ ಖರೀದಿ ಯತ್ನ ಆರೋಪ ಪ್ರಕರಣ: ಬಿ ಎಲ್ ಸಂತೋಷ್​ಗೆ ಸಮನ್ಸ್​ ಜಾರಿ

ಈ ಹಿಂದೆ ನ.21ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಮೊದಲಿಗೆ ಬಿಎಲ್ ಸಂತೋಷ್​ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆಗ ಈ ನೋಟಿಸ್‌ ಪ್ರಶ್ನಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆಗ ನೋಟಿಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿ, ಬಿಎಲ್​ ಸಂತೋಷ್ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು.

ಇದನ್ನೂ ಓದಿ:ತೆಲಂಗಾಣದೊಂದಿಗೆ ದೆಹಲಿ, ಆಂಧ್ರ ಸರ್ಕಾರಗಳನ್ನೂ ಉರುಳಿಸಲು ಪಿತೂರಿ: ಬಿಜೆಪಿ ವಿರುದ್ಧ ಕೆಸಿಆರ್ ಆರೋಪ

ಇದಾದ ನಂತರ ಸಂತೋಷ್ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಎಸ್ಐಟಿ ಹೈಕೋರ್ಟ್ ಗಮನಕ್ಕೆ ತಂದಿತ್ತು. ಆಗ ಮತ್ತೆ ನೋಟಿಸ್ ನೀಡಲು ಹೈಕೋರ್ಟ್ ಆದೇಶ ಕೊಟ್ಟಿತ್ತು. ಅಂತೆಯೇ, ನ.26 ಅಥವಾ 28ರಂದು ಹಾಜರಾಗುವಂತೆ ಇದೇ 23ರಂದು ಎರಡನೇ ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಎಸ್‌ಐಟಿಯ ಇತ್ತೀಚಿನ ನೋಟಿಸ್‌ ಪ್ರಶ್ನಿಸಿ ಬಿಎಲ್‌ ಸಂತೋಷ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ: ಟಿಆರ್​ಎಸ್ ಪಕ್ಷ​ ಬಿಡಲು ಬಿಜೆಪಿಯಿಂದ 100 ಕೋಟಿ ರೂ ಹಾಗೂ ಗುತ್ತಿಗೆ ಆಮಿಷವೊಡ್ಡಲಾಗಿದೆ ಎಂದು ಶಾಸಕರು ಆರೋಪಿಸಿದ್ದರು. ಅಲ್ಲದೇ, ತಾಂಡೂರಿನ ಟಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ದೂರಿನ ಆಧಾರದ ಮೇಲೆ ಅಕ್ಟೋಬರ್ 26ರಂದು ಪ್ರಕರಣ ದಾಖಲಾಗಿತ್ತು. ನವೆಂಬರ್ 10ರಂದು ರಾಜ್ಯ ಸರ್ಕಾರವು ಪ್ರಕರಣದ ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನು ರಚಿಸಿದೆ.

ಇದನ್ನು ಓದಿ:ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಕೇಸ್​: ಬಂಧಿತ ಆರೋಪಿ ಬಳಿ ಕರ್ನಾಟಕ ವಿಳಾಸದ 2 ಪಾಸ್​ಪೋರ್ಟ್​​ ಪತ್ತೆ

ABOUT THE AUTHOR

...view details