ನವದೆಹಲಿ:ದೇಶಾದ್ಯಂತ ಕಳೆದ ಕೆಲ ದಿನಗಳಿಂದ ನಿರಂತರವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಪ್ರತಿದಿನ ಹಿಡಿಶಾಪ ಹಾಕುತ್ತಿದ್ದಾರೆ. ಇದೇ ವಿಚಾರವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಚರ್ಚೆ ನಡೆಸುವ ಅವಶ್ಯಕತೆ ಇದೆ ಎಂದಿರುವ ಅವರು, ಇದರಿಂದ ಗ್ರಾಹಕರಿಗೆ ಹೊರೆಯಾಗುತ್ತಿದೆ ಎಂಬ ವಿಷಯ ಒಪ್ಪಿಕೊಂಡಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಗ್ರಾಹಕರ ಅವಶ್ಯಕತೆ ನಮಗೆ ಅರ್ಥವಾಗಿದೆ. ಆದರೆ ಈಗ ಸರ್ಕಾರಕ್ಕೆ ಭೀಕರ ಪರಿಸ್ಥಿತಿ ಎದುರಾಗಿದ್ದು, ಸರ್ಕಾರ ಏನೇನು ತೆರಿಗೆ ಸಂಗ್ರಹಿಸುತ್ತದೋ ಅದರಲ್ಲಿ 41%ರಷ್ಟು ರಾಜ್ಯಗಳಿಗೆ ಹೋಗುತ್ತದೆ ಎಂದರು.