ನವದೆಹಲಿ: ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ನ ವಿಚಾರಣೆಯನ್ನು ಇಂದು ಮುಂದುವರೆಸಿದೆ.
23 ಅರ್ಜಿಗಳ ಬ್ಯಾಚ್ ಅನ್ನು ಪೀಠದ ಮುಂದೆ ಪಟ್ಟಿ ಮಾಡಲಾಗಿದೆ. ಇವುಗಳಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವ ಹಕ್ಕನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಸಲ್ಲಿಸಲಾದ ರಿಟ್ ಅರ್ಜಿಗಳಾಗಿವೆ. ಇನ್ನು ಕೆಲವು ವಿಶೇಷ ಲೀವ್ ಪಿಟಿಷನ್ ಅರ್ಜಿಗಳಾಗಿದ್ದು, ಮಾರ್ಚ್ 15 ರಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ತೀರ್ಪನ್ನು ಪ್ರಶ್ನಿಸಿ ಇವನ್ನು ಸಲ್ಲಿಸಲಾಗಿದೆ.