ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಕೀಲ ಎಂ.ಆರ್.ಶಂಶಾದ್ ಮೂಲಕ ಮಂಡಳಿ ಹಾಗೂ ಇಬ್ಬರು ಮುಸ್ಲಿಂ ಮಹಿಳಾ ಸಂಘಟನೆ ಸದಸ್ಯರಾದ ಮುನಿಸಾ ಬುಶ್ರಾ ಮತ್ತು ಜಲೀಸಾ ಸುಲ್ತಾನಾ ಯಾಸೀನ್ ಈ ಅರ್ಜಿ ಸಲ್ಲಿಸಿದ್ದಾರೆ.
ಹೈಕೋರ್ಟ್ ತೀರ್ಪಿನಲ್ಲಿ ಇಸ್ಲಾಮಿಕ್ ಕಾನೂನಿನ ಪ್ರಾಥಮಿಕ ಪಠ್ಯ ಮತ್ತು ಧರ್ಮ ಗ್ರಂಥ ಕುರಾನ್‌ನಲ್ಲಿರುವ ವಿಷಯದ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಮುಸ್ಲಿಂ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ ಎಂದು ಮಂಡಳಿ ಅರ್ಜಿಯಲ್ಲಿ ದೂರಿದೆ.