ಚೆನ್ನೈ(ತಮಿಳುನಾಡು): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದ ಈಗಾಗಲೇ ಪಕ್ಕದ ರಾಜ್ಯಗಳಿಗೂ ಹಬ್ಬಿದೆ. ಕಳೆದ ಎರಡು ದಿನಗಳ ಹಿಂದೆ ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ಧರ್ಮದ ಘೋಷಣೆ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ಗೆ ಇದೀಗ ತಮಿಳುನಾಡಿನಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಮುಸ್ಲಿಂ ಮುನ್ನೇತ್ರ ಕಳಗಂ(TMMK) ಪ್ರಶಸ್ತಿ ಘೋಷಣೆ ಮಾಡಿದೆ.
ಮಂಡ್ಯದಲ್ಲಿ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ತಮಿಳುನಾಡಿನಲ್ಲಿ ಪ್ರಶಸ್ತಿ ಘೋಷಣೆ - ಅಲ್ಲಾಹು ಅಕ್ಬರ್ ಎಂದ ವಿದ್ಯಾರ್ಥಿನಿ
ಮಂಡ್ಯದ ಪಿಇಎಸ್ ಕಾಲೇಜಿನ ಬಳಿ ಧಾರ್ಮಿಕ ಹಿನ್ನೆಲೆಯ ಘೋಷಣೆ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್ಗೆ ಇದೀಗ ತಮಿಳುನಾಡಿನಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕಾಲೇಜ್ಗೆ ಅಸೈನ್ಮೆಂಟ್ ಕೊಡಲು ತೆರಳಿದ್ದ ವೇಳೆ ಕೆಲವರು ಬುರ್ಕಾ ತೆಗೆದು ಹೋಗುವಂತೆ ಚುಡಾಯಿಸಿದ್ದಾರೆ. ಗುಂಪು ಕಟ್ಟಿಕೊಂಡು ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಪ್ರತಿಯಾಗಿ ಯುವತಿ ಅಲ್ಲಾಹು ಅಕ್ಬರ್ ಎಂದು ಕೂಗಿದ್ದರು. ಇದರ ಬೆನ್ನಲ್ಲೇ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ಯುವತಿ ಧೈರ್ಯಕ್ಕೆ ಮೆಚ್ಚಿ ತಮಿಳುನಾಡು ಮುಸ್ಲಿಂ ಮುನ್ನೇತ್ರ ಕಳಗಂ(ಟಿಎಂಎಂಕೆ) ಫಾತಿಮಾ ಶೇಖ್ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ.
ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಟಿಎಂಎಂಕೆ, ಓರ್ವ ಭಾರತೀಯ ಪ್ರಜೆಯಾಗಿ ಯುವತಿ ತನ್ನ ಹಕ್ಕು ಪ್ರತಿಪಾದನೆ ಮಾಡಿದ್ದಾಳೆ. ದೇಶದ ಮೊದಲ ಮುಸ್ಲಿಂ ಶಿಕ್ಷಕಿ ಎಂದು ಕರೆಯಲ್ಪಡುವ ಫಾತಿಮಾ ಶೇಖ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಮುಸ್ಕಾನ್ಗೆ ಈ ಪ್ರಶಸ್ತಿ ನೀಡಲು ನಮಗೆ ಹೆಮ್ಮೆ ಎನಿಸುತ್ತದೆ ಎಂದು ಜವಾಹಿರುಲ್ಲಾ ತಿಳಿಸಿದ್ದಾರೆ.