ನವದೆಹಲಿ :ಶಾಲಾ- ಕಾಲೇಜ್ಗಳಲ್ಲಿ ಹಿಜಾಬ್ ಹಾಕಿಕೊಂಡು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನೆ ಮಾಡಿ ಇದೀಗ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಇದರ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸರ್ವೋನ್ನತ ನ್ಯಾಯಾಲಯ ಹೇಳಿದೆ.
ರಾಜ್ಯದಲ್ಲಿ ಉಂಟಾಗಿದ್ದ ಹಿಜಾಬ್ ವಿವಾದದ ಬಗ್ಗೆ ನಿನ್ನೆ ಅಂತಿಮ ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್, ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ನಿಗದಿಪಡಿಸುವ ಸಮವಸ್ತ್ರವನ್ನ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲಿ ಯಾವುದೇ ಕಾರಣಕ್ಕೂ ಹಿಜಾಬ್, ಕೇಸರಿ ಶಾಲ್ಗಳಿಗೆ ಅವಕಾಶವಿಲ್ಲ ಎಂದು ತೀರ್ಪು ನೀಡಿತ್ತು.
ಇದನ್ನ ಪ್ರಶ್ನೆ ಮಾಡಿದ್ದ ವಿದ್ಯಾರ್ಥಿನಿ ನಿಬಾನಾಜ್ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಮೇಲ್ಮನವಿ ಅರ್ಜಿಯನ್ನ ಹೋಳಿ ಹಬ್ಬದ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಸುಪ್ರೀಂಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸಂಜಯ್ ಹೆಗ್ಡೆ ಇದರ ವಿಚಾರಣೆ ನಡೆಸಲಿದ್ದಾರೆ.