ನವದೆಹಲಿ:ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾರ ಹುಟ್ಟೂರಾದ ಹಿಮಾಚಲ ಪ್ರದೇಶದ ಜಲ್ಪೇಹಾರ್ ಗ್ರಾಮದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ದೆಹಲಿಯಿಂದ ಜಲ್ಪೇಹಾರ್ ಗ್ರಾಮಕ್ಕೆ ಅವರ ಪಾರ್ಥಿವ ಶರೀರ ತಲುಪಿದೆ.