ಶಿಮ್ಲಾ:ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಮುನ್ನ ನಡೆಸುವ ಕಡ್ಡಾಯ ಕೋವಿಡ್ ಪರೀಕ್ಷೆ ವೇಳೆ ಅವರಿಗೆ ಸೋಂಕು ದೃಢಪಟ್ಟಿದೆ. ಅವರಿಗೆ ಲಕ್ಷ್ಮಣ ರಹಿತ ಸೋಂಕು ಕಂಡುಬಂದಿದ್ದು, ಕ್ವಾರಂಟೈನ್ಗೆ ಒಳಗಾಗಿದ್ದಾರೆ. ನಿಗದಿಯಾಗಿದ್ದ ಅವರ ಎಲ್ಲಾ ಕಾರ್ಯಗಳನ್ನು ಮುಂದೂಡಲಾಗಿದೆ ಎಂದು ಇದೇ ವೇಳೆ ತಿಳಿಸಲಾಗಿದೆ.
ಕಳೆದ ಮೂರು ದಿನದ ಹಿಂದೆ ಸುಖು, ಉಪ ಮುಖ್ಯಮಂತ್ರಿ ಮುಕೇಶ್ ಅಗ್ನಿಹೋತ್ರಿ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾದ ಪ್ರತಿಭಾ ಸಿಂಗ್ ಮತ್ತು 38 ಹೊಸ ಶಾಸಕರು ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಸ್ಥಾನದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದರು. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿರುವ ಸಿಎಂ ಸುಖು, ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಾಜೀವ್ ಶುಲ್ಕಾ, ಮಾಜಿ ಹರಿಯಾಣ ಸಿಎಂ ಭೂಪೇಂದ್ರ ಸಿಂಗ್ ಹೂಡ ಸೇರಿದಂತ ಅನೇಕ ಕಾಂಗ್ರೆಸ್ ನಾಯಕರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾಗಿದ್ದರು.
ಇದನ್ನೂ ಓದಿ:ಪಂಜಾಬ್: ಭಾರತದ ಗಡಿಯಲ್ಲಿ ಎರಡು ಪಾಕಿಸ್ತಾನಿ ಡ್ರೋನ್‌ಗಳ ಹಾರಾಟ