ಜೈಪುರ: ಅಜ್ಮೀರ್‌ನಲ್ಲಿರುವ ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ದರ್ಗಾ ಒಂದು ಕಾಲದಲ್ಲಿ ದೇವಸ್ಥಾನವಾಗಿತ್ತು ಎಂದು ಹಿಂದೂ ಸಂಘಟನೆಯೊಂದು ಹೇಳಿದ್ದು, ಈ ಕುರಿತು ಆವರಣದ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಒತ್ತಾಯಿಸಿದೆ.
ಮಹಾರಾಣಾ ಪ್ರತಾಪ್ ಸೇನೆ ಸಂಘಟನೆಯ ರಾಜವರ್ಧನ್ ಸಿಂಗ್ ಪರ್ಮಾರ್ ಎಂಬುವರು ದರ್ಗಾದ ಗೋಡೆಗಳು ಮತ್ತು ಕಿಟಕಿಗಳ ಮೇಲೆ ಹಿಂದೂ ಧಾರ್ಮಿಕ ಚಿಹ್ನೆಗಳಿವೆ. "ಖ್ವಾಜಾ ಗರೀಬ್ ನವಾಜ್ ಅವರ ದರ್ಗಾ ಹಿಂದೆ ಪ್ರಾಚೀನ ಹಿಂದೂ ದೇವಾಲಯವಾಗಿತ್ತು. ಗೋಡೆಗಳು ಮತ್ತು ಕಿಟಕಿಗಳ ಮೇಲೆ ಸ್ವಸ್ತಿಕ ಚಿಹ್ನೆಗಳಿವೆ. ಕೂಡಲೇ ಭಾರತೀಯ ಪುರಾತತ್ವ ಇಲಾಖೆ ದರ್ಗಾದ ಸಮೀಕ್ಷೆ ನಡೆಸಬೇಕೆಂದು" ಎಂದು ಮನವಿ ಮಾಡಿದ್ದಾರೆ.