ಹೈದರಾಬಾದ್(ತೆಲಂಗಾಣ):ತೆಲಂಗಾಣದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಈಗಾಗಲೇ ಮೂರು ದಿನಗಳ ಕಾಲ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ, ವರುಣಾರ್ಭಟ ನಿಲ್ಲುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಇದೇ ಕಾರಣಕ್ಕಾಗಿ ಮುಂದಿನ ಮೂರು ದಿನಗಳವರೆಗೆ ರಜೆ ವಿಸ್ತರಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರ ಬಿದ್ದಿದೆ.
ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದಿನಾಂಕ 14.7.2022 ರಿಂದ 16.7.2022 ರವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ರಜೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಸಂಸ್ಥೆಗಳು 18.07.2022 ರಿಂದ ಪುನಾರಂಭಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.