ಹೈದರಾಬಾದ್:ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿಶೇಷ ಚೇತನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಹೋಮ್ಗಾರ್ಡ್ವೊಬ್ಬನಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ಸ್ಥಳೀಯ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಮೊದಲ ಹೆಚ್ಚುವರಿ ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶೆ ಸುನಿತಾ ಕುಂಚಲಾ ಅವರು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ, 2015 ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ, 2015 ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಕಠಿಣ ಜೀವಾವಧಿ ಶಿಕ್ಷೆ, ಪೋಕ್ಸೊ ಕಾಯ್ದೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ತಪ್ಪಿತಸ್ಥನಿಗೆ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಾಲಯವು ಅಪರಾಧಿಗೆ ಒಟ್ಟು 50,000 ರೂ. ದಂಡ ವಿಧಿಸಿದೆ. ಪ್ರಾಸಿಕ್ಯೂಷನ್ ಪ್ರಕಾರ, ಪೋಷಕರು ಇಲ್ಲದಿರುವ ಸಮಯ ನೋಡಿ ದಿನಸಿ ವಸ್ತುಗಳನ್ನು ನೀಡುವ ನೆಪದಲ್ಲಿ ಅಕ್ಟೋಬರ್ 2020 ರಲ್ಲಿ ಹುಡುಗಿಯ ಮನೆಗೆ ನುಸುಳಿ ಅತ್ಯಾಚಾರ ಎಸಗಿದ್ದಾನೆ.