ಶ್ರೀನಗರ(ಜಮ್ಮು-ಕಾಶ್ಮೀರ): 2019ರ ಆಗಸ್ಟ್ 5 ರಂದು ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಮೊದಲ ಬಾರಿಗೆ ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಂಡಿರುವ ಗೃಹ ಸಚಿವ ಅಮಿತ್ ಶಾ ಇಂದು ಶ್ರೀನಗರಕ್ಕೆ ಭೇಟಿ ನೀಡುತ್ತಿದ್ದಾರೆ.
ಶ್ರೀನಗರದಲ್ಲಿ ಭದ್ರತೆ ಮತ್ತು ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಎರಡೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಭದ್ರತಾ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಐವರು ಸ್ಥಳೀಯೇತರ ಕಾರ್ಮಿಕರು ಸೇರಿದಂತೆ ಒಂಬತ್ತು ಮಂದಿ ನಾಗರಿಕರ ಹತ್ಯೆಯಾದ ಬಳಿಕ ಕೇಂದ್ರ ಗೃಹ ಸಚಿವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ಶ್ರೀನಗರದಿಂದ ತಮ್ಮ ಭೇಟಿಯನ್ನು ಆರಂಭಿಸುತ್ತಿದ್ದು, ಮೊದಲು ಅಧಿಕಾರಿಗಳು, ಪಂಚಾಯತ್, ಡಿಡಿಸಿ ಸದಸ್ಯರು ಹಾಗೂ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.