ಕರ್ನಾಟಕ

karnataka

ETV Bharat / bharat

ರೈತರ ವಿರುದ್ಧ ಪ್ರಕರಣಗಳನ್ನು ಹಿಂಪಡೆಯಲಾಗಿದೆ: ಕೇಂದ್ರ ಕೃಷಿ ಸಚಿವರ ಮಾಹಿತಿ - ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಗೆ ಲಿಖಿತ ಉತ್ತರ

ಆಶ್ವಾಸನೆಯಂತೆ ರೈತರ ಪ್ರತಿಭಟನೆ ಸಂದರ್ಭದಲ್ಲಿ ರೈತರ ಮೇಲೆ ದಾಖಲಾಗಿರುವ ಎಲ್ಲಾ ರಾಜ್ಯಗಳಲ್ಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​ ಹೇಳಿದ್ದಾರೆ.

Home Ministry agreed to withdraw cases  against 86 farmers  farmers agitation  Agriculture Minister Narendra Singh Tomar  Rajya Sabha Winter Session  ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ  ಪ್ರತಿಭಟನೆ ನಡೆಸಿದ್ದ ರೈತರ ಪ್ರಕರಣವನ್ನು ಹಿಂಪಡೆಯಲಾಗಿದೆ  ಕೇಂದ್ರ ಕೃಷಿ ಸಚಿವ ಮಾಹಿತಿ  ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್  ಎಲ್ಲಾ ರಾಜ್ಯಗಳಲ್ಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ  ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆ  ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಗೆ ಲಿಖಿತ ಉತ್ತರ  ಗೃಹ ವ್ಯವಹಾರಗಳ ಸಚಿವಾಲಯದಿಂದ ಪಡೆದ ಮಾಹಿತಿ
ಕೇಂದ್ರ ಕೃಷಿ ಸಚಿವ ಮಾಹಿತಿ

By

Published : Dec 17, 2022, 11:22 AM IST

ನವದೆಹಲಿ: ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ 86 ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಗೃಹ ಸಚಿವಾಲಯವು ಒಪ್ಪಿಗೆ ನೀಡಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಗೃಹ ವ್ಯವಹಾರಗಳ ಸಚಿವಾಲಯದಿಂದ ಪಡೆದ ಮಾಹಿತಿಗಳ ಪ್ರಕಾರ, ರೈತರ ವಿರುದ್ಧದ 86 ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರದಿಂದ ಸಮ್ಮತಿಸಲಾಗಿದೆ. ಇದಲ್ಲದೆ, ರೈಲ್ವೆ ರಕ್ಷಣಾ ಪಡೆ ರೈತರ ಪ್ರತಿಭಟನೆ ಸಮಯದಲ್ಲಿ ದಾಖಲಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ರೈಲ್ವೆ ಸಚಿವಾಲಯವು ನಿರ್ದೇಶನ ನೀಡಿದೆ ಎಂದು ಸಚಿವ ತೋಮರ್​ ಹೇಳಿದರು.

ಆಶ್ವಾಸನೆಯಂತೆ ಪ್ರತಿಭಟನೆ ಸಂದರ್ಭದಲ್ಲಿ ರೈತರ ಮೇಲೆ ದಾಖಲಾಗಿರುವ ಎಲ್ಲಾ ರಾಜ್ಯಗಳಲ್ಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆಯೇ ಎಂಬ ಕಾಂಗ್ರೆಸ್ ಸದಸ್ಯ ದೀಪೇಂದರ್ ಸಿಂಗ್ ಹೂಡಾ ಅವರ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದರು.

ಪ್ರತಿಭಟನೆಯ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರದ ವಿವರಗಳ ಕುರಿತು ಹೂಡಾ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ತೋಮರ್, ಅಂತಹ ವಿವರಗಳನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ನಿರ್ವಹಿಸಲಾಗಿಲ್ಲ ಎಂದು ಹೇಳಿದರು.

ಓದಿ:5G ಗಾಗಿ ಟೆಲಿಕಾಂ ಆಪರೇಟರ್‌ಗಳು ವಾರಕ್ಕೆ ಸರಾಸರಿ 2,500 ಬೇಸ್ ಸ್ಟೇಷನ್‌ಗಳನ್ನು ಸ್ಥಾಪಿಸುತ್ತಿದೆ: ಕೇಂದ್ರ ಮಾಹಿತಿ

ABOUT THE AUTHOR

...view details