ಅಲಪ್ಪುಳ(ಕೇರಳ): ವಿದೇಶಿ ಮಹಿಳೆಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಇಲ್ಲಿನ ಹೋಮ್ ಸ್ಟೇ ಮಾಲೀಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದೇಶಿ ಮಹಿಳೆ ನೀಡಿದ ಆಧಾರದ ಮೇಲೆ ಶಯಾಜ್ (27) ಎಂಬಾತನನ್ನು ಬಂಧಿಸಲಾಗಿದೆ. ಜನವರಿ 4ರಂದು ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಡಿ ಮಸಾಜ್ ಮಾಡುವುದಾಗಿ ಶಯಾಜ್ ರೂಮ್ ಒಳಗೆ ಬಂದಿದ್ದ. ನಂತರ ಬಾಗಿಲನ್ನು ಹಾಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ಇಂದು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ- ಬ್ಯೂಟಿ ಪಾರ್ಲರ್ ಮಾಲೀಕನ ಬಂಧನ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನನ್ನು ಪೆರೂರ್ಕಡ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಘಟನೆ ಕೇರಳದ ತಿರುವನಂತಪುರಂ ಬಳಿ ನಡೆದಿದೆ. ಆರೋಪಿಯನ್ನು ಪೊಂಗುಮೂಡು ನಿವಾಸಿ ಜಿ.ರತೀಶ್ ಎಂದು ಗುರುತಿಸಲಾಗಿದೆ. ಈತ ಪೆರೂರ್ಕಡದಲ್ಲಿ ಬ್ಯೂಟಿ ಪಾರ್ಲರ್ ಮತ್ತು ಫಿಟ್ನೆಸ್ ಕ್ಲಿನಿಕ್ ನಡೆಸುತ್ತಿದ್ದಾನೆ. ಕೆಲ ದಿನಗಳ ಹಿಂದೆ ಮುಖದ ಚಿಕಿತ್ಸೆಗಾಗಿ ಆತನ ಪಾರ್ಲರ್ ಗೆ ಬಂದಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ: ಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ; 44 ಮಹಿಳೆಯರ ರಕ್ಷಣೆ, 34 ಆರೋಪಿಗಳು ವಶಕ್ಕೆ