ಕರ್ನಾಟಕ

karnataka

ETV Bharat / bharat

ನಕಲಿ ಮದ್ಯ ಸೇವಿಸಿ ಐವರು ಸಾವು.. 22 ಮಂದಿ ಅಸ್ವಸ್ಥ

ಉತ್ತರ ಪ್ರದೇಶದಲ್ಲಿ ಮತ್ತೊಂದು ಕಳ್ಳಭಟ್ಟಿ ದುರಂತ ಸಂಭವಿಸಿದೆ. ನಕಲಿ ಮದ್ಯ ಸೇವಿಸಿ ಐವರು ಸಾವನ್ನಪ್ಪಿದ್ದರೆ, 22 ಮಂದಿ ಅಸ್ವಸ್ಥರಾಗಿದ್ದಾರೆ. ನಕಲಿ ಮದ್ಯದ ವ್ಯಾಪಾರದಲ್ಲಿ ತೊಡಗಿರುವ ಕೆಲ ವ್ಯಕ್ತಿಗಳು ದಾಳಿ ಭಯದಿಂದ ಮದ್ಯವನ್ನು ಕಾಲುವೆಯಲ್ಲಿ ಎಸೆದಿದ್ದಾರೆ, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿ ಅಸ್ವಸ್ಥಗೊಂಡಿದ್ದವರನ್ನು ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಯಿತು ಎಂದು ಅಲಿಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ನಕಲಿ ಮದ್ಯ ಸೇವನೆ
ನಕಲಿ ಮದ್ಯ ಸೇವನೆ

By

Published : Jun 3, 2021, 6:24 PM IST

ಅಲಿಗಢ್ (ಉತ್ತರ ಪ್ರದೇಶ): ಕಳ್ಳಭಟ್ಟಿ​ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ರೋಹೆರಾ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ ಐವರು ಮೃತಪಟ್ಟಿದ್ದು, 22 ಮಂದಿ ಅಸ್ವಸ್ಥರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ರಾತ್ರಿ, ಜವಾನ್ ಪ್ರದೇಶದ ರೋಹೆರಾ ಗ್ರಾಮದ ಬಳಿಯ ಕಾಲುವೆಯಲ್ಲಿ ಎಸೆದಿದ್ದ ಮದ್ಯ ಸೇವಿಸಿ ಇಟ್ಟಿಗೆ ಗೂಡು ಕಾರ್ಮಿಕರು ಅಸ್ವಸ್ಥರಾಗಿದ್ದು, ಕನಿಷ್ಠ 5 ಮಂದಿ ಕೊನೆಯುಸಿರೆಳೆದಿದ್ದಾರೆ.

ನಕಲಿ ಮದ್ಯದ ವ್ಯಾಪಾರದಲ್ಲಿ ತೊಡಗಿರುವ ಕೆಲ ವ್ಯಕ್ತಿಗಳು ದಾಳಿಯ ಭಯದಿಂದ ಮದ್ಯವನ್ನು ಕಾಲುವೆಯಲ್ಲಿ ಎಸೆದಿದ್ದಾರೆ, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿ ಅಸ್ವಸ್ಥಗೊಂಡಿದ್ದವರನ್ನು ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೇರಿಸಲಾಯಿತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈಥಾನಿ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆ ಮುಖ್ಯ ಅಧೀಕ್ಷಕ ಡಾ.ಹ್ಯಾರಿಸ್ ಮಂಜೂರ್​​, ಈವರೆಗೆ ಐವರು ಮೃತಪಟ್ಟಿದ್ದಾರೆ. 22 ಮಂದಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇನ್ನು ಮುಂಚೆಯೇ ಕರೆ ತಂದಿದ್ದರೆ ಹೆಚ್ಚಿನ ಜೀವಗಳನ್ನು ಉಳಿಸಬಹುದಿತ್ತು ಎಂದು ಮಂಜೂರ್ ಹೇಳಿದ್ದಾರೆ.

ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 28 ರಿಂದ 87 ಮೃತದೇಹಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, 35 ಜನರು ಅಕ್ರಮ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:ಬಂಧಿಸಲು ಬಂದ ಪೊಲೀಸನನ್ನೇ ಒತ್ತೆಯಾಳಾಗಿ ಇಟ್ಟುಕೊಂಡ ಗಾಂಜಾ ಡೀಲರ್ಸ್​​

ಜವಾಹರ್ ಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಕಣ್ಣಿನ ತಜ್ಞ ಡಾ.ಜಿಯಾ ಸಿದ್ದಿಕಿ ಪ್ರಕಾರ, ತೀವ್ರ ಕಣ್ಣಿನ ಹಾನಿಯಿಂದ ಬಳಲುತ್ತಿರುವ ಆರು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ತೀವ್ರ ಸ್ವರೂಪದ ತೊಂದರೆ ಅನುಭವಿಸಿದ್ದಾರೆ. ಉಳಿದ ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ. ಈವರೆಗೆ 16 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details