ಥಾಣೆ (ಮಹಾರಾಷ್ಟ್ರ): ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ದೇಶದ ಅಭಿವೃದ್ಧಿ, ಒಳಿತಿಗಾಗಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಪಾಟೀಲ್ ಹೇಳಿದರು.
2024ರ ವೇಳೆಗೆ ಪಿಒಕೆ ಭಾರತಕ್ಕೆ ಸೇರುತ್ತದೆ: ಕೇಂದ್ರ ಸಚಿವ ಕಪಿಲ್ ಪಾಟೀಲ್ ವಿಶ್ವಾಸ ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಶನಿವಾರ ರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಈರುಳ್ಳಿ ಮತ್ತು ಆಲೂಗಡ್ಡೆ ಬೆಲೆ ಇಳಿಸಲು ಮೋದಿ ಪ್ರಧಾನಿಯಾಗಲಿಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು ಹೇಳಿದರು.
ಇದನ್ನೂ ಓದಿ:ಮಹಾಮಾರಿ ಕೋವಿಡ್ ವಿರುದ್ಧದ ಭಾರತದ ಹೋರಾಟ ಸ್ಫೂರ್ತಿದಾಯಕ - ರಾಷ್ಟ್ರಪತಿ ಕೋವಿಂದ್ ಬಣ್ಣನೆ