ವಡೋದರಾ, ಗುಜರಾತ್:ಗುಜರಾತ್ನ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಪುರೈ ಬ್ರಿಡ್ಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಟ್ರಕ್‌ಗೆ ಐಷಾರಾಮಿ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 6 ಮಂದಿ ದಾರುಣವಾಗಿ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ.
ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ.. ಟ್ರಕ್‌ಗೆ ಬಸ್ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಗುಜರಾತ್ನ ವಡೋದರಾದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಮಂದಿ ಪ್ರಾಣ ಕಳೆದುಕೊಂಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಗುಜರಾತ್ನಲ್ಲಿ ಭೀಕರ ರಸ್ತೆ ಅಪಘಾತ
ವಡೋದರಾಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟ್ರಕ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಒಂದು ಭಾಗ ನಜ್ಜುಗುಜ್ಜಾಗಿದೆ. ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ವಡೋದರದ ಎಸ್‌ಎಸ್‌ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಓದಿ:ಕಿತ್ತಾಡಿ ಜೈಲಿಗೇ ಬೆಂಕಿ ಹಾಕಿದ ಕೈದಿಗಳು..8 ಮಂದಿ ಅಪರಾಧಿಗಳು ಸಜೀವ ದಹನ