ಗಾಜಿಯಾಬಾದ್ (ಉತ್ತರ ಪ್ರದೇಶ) :ಬೆಳಗ್ಗೆ ಹತ್ತು ಗಂಟೆ ವೇಳೆಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಎರಡು ಅಂತಸ್ಥಿನ ಮನೆ ಕುಸಿದು ಬಿದ್ದಿದೆ. ಮನೆಯ ಅವಶೇಷದ ಅಡಿ ಸಿಲುಕಿದ್ದ ಐವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ವೇಳೆ ಇಬ್ಬರು ಮಕ್ಕಳು ಮತ್ತು ಮಹಿಳೆ ಮರಣ ಹೊಂದಿರುವ ಬಗ್ಗೆ ತಿಳಿದು ಬಂದಿದೆ.
ಘಟನೆ ಗಾಜಿಯಾಬಾದ್‌ನ ಲೋಣಿ ಪೊಲೀಸ್ ಠಾಣೆ ವ್ಯಾಪ್ತಿಯ ಬಬ್ಲು ಗಾರ್ಡನ್‌ನಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಲೋಣಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಅವಶೇಷಶಗಳ ಅಡಿ ಸಿಲುಕಿದ್ದವರನ್ನು ಬಿಡಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡ ಮನೆ ಬಬ್ಲು ಗಾರ್ಡನ್ ವಾಸಿ ಮುನಿರ್ ಎಂಬುವವರದ್ದು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮುನೀರ್, ಅವರ ಪತ್ನಿ ಮತ್ತು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.