ಚಮೋಲಿ(ಉತ್ತರಾಖಂಡ):ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮನೆಯೊಂದು ಕುಸಿದಿದೆ. ಈ ಪರಿಣಾಮ ಸುಮಾರು 7ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಆ ಮನೆಯೊಳಗೆ ಸಿಲುಕಿದ್ದರು ಎಂದು ವರದಿಯಾಗಿತ್ತು. ಇತ್ತೀಚಿನ ವರದಿ ಪ್ರಕಾರ ಈ ಘಟನೆಯಲ್ಲಿ ಎರಡು ಸಾವಾಗಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ರಕ್ಷಣಾ ಪಡೆ ಕಾರ್ಯಾಚರಣೆ ಆರಂಭಿಸಿ ಮೂವರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಇನ್ನುಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಚಮೋಲಿ ಪೊಲೀಸ್ ವರಿಷ್ಠ ಪ್ರಮೇಂದ್ರ ದೋಬೋಲ್ ನೀಡಿರುವ ಹೇಳಿಕೆ ಪ್ರಕಾರ, ಜೋಶಿಮಠ ಡೆವಲಪ್‌ಮೆಂಟ್ ಬ್ಲಾಕ್‌ನ ಹೈಲಾಂಗ್ ಗ್ರಾಮದಲ್ಲಿ ಮನೆ ಕುಸಿದಿದೆ. ಈ ಘಟನೆಯಲ್ಲಿ ಭರದ ರಕ್ಷಣಾ ಕಾರ್ಯಾಚರಣೆ ಕೈಗೊಂಡಿರುವ ರಾಜ್ಯ ವಿಪತ್ತು ನಿರ್ವಹಣಾ ಪಡೆ ಎಸ್‌ಡಿಆರ್‌ಎಫ್ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ನಾಲ್ವರು ಅವಶೇಷಗಳಡಿ ಸಿಕ್ಕಿಬಿದ್ದಿರುವ ಆತಂಕವಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ರಕ್ಷಣೆ ಮಾಡಿರುವ ಕಾರ್ಮಿಕರ ಸ್ಥಿತಿ ಸ್ಥಿರವಾಗಿದೆ ಎಂದು ಚಮೋಲಿ ಎಸ್ಪಿ ಪ್ರಮೇಂದ್ರ ದೋವಲ್ ತಿಳಿಸಿದ್ದಾರೆ. ಮೂವರಿಗೂ ಜೋಶಿಮಠದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಶೇಷಗಳಡಿ ಸಿಲುಕಿರುವ ಇನ್ನುಳಿದವರಿಗಾಗಿ ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಒಂದು ಸಾವಿನ ವರದಿಯಾಗಿದೆ.