ಕರ್ನಾಟಕ

karnataka

ETV Bharat / bharat

ದೆಹಲಿಯಲ್ಲಿ ಭಾರಿ ಮಳೆ: ವಿಮಾನ ಸಂಚಾರದಲ್ಲಿ ವ್ಯತ್ಯಯ, ವಿದ್ಯುತ್ ಸಂಪರ್ಕ ಕಡಿತ

ರಾಷ್ಟ್ರ ರಾಜಧಾನಿ ಮತ್ತು ಸಮೀಪದ ಪ್ರದೇಶಗಳಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗುಸಹಿತ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ (ಐಎಂಡಿ) ಮುನ್ಸೂಚನೆ ನೀಡಿದೆ.

Delhi rain
ದೆಹಲಿಯಲ್ಲಿ ಭಾರಿ ಮಳೆ

By

Published : May 23, 2022, 7:45 AM IST

Updated : May 23, 2022, 10:10 AM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ರಾತ್ರಿ ಹಾಗೂ ಇಂದು ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಜನ, ವಾಹನ ಸಂಚಾರಕ್ಕೆ ತೊಡಕಾಗಿದೆ. ವಿಮಾನ ಸಂಚಾರದಲ್ಲೂ ವ್ಯತ್ಯಯವಾಗಿದೆ. 'ಪ್ರತಿಕೂಲ ಹವಾಮಾನದ ಕಾರಣ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ವಿಮಾನ ಸಂಚಾರದ ಕೊನೆ ಕ್ಷಣದ ಮಾಹಿತಿಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳ ಜತೆ ಸಂಪರ್ಕದಲ್ಲಿರಿ' ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಗಾಜಿಯಾಬಾದ್, ಹಿಂಡನ್ ವಾಯುನೆಲೆ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ಹಲವೆಡೆ ಗುಡುಗುಸಹಿತ ಭಾರಿ ಮಳೆ ಮುಂದುವರಿಯಲಿದೆ ಎಂದು ಸೋಮವಾರ ಮುಂಜಾನೆ ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ.

ದೆಹಲಿಯಲ್ಲಿ ಭಾರಿ ಮಳೆ: ಧರೆಗುರುಳಿದ ಮರ

ಗುರುಗ್ರಾಮ್‌ನಲ್ಲಿ ರಸ್ತೆಗಳು ಜಲಾವೃತ: ಹರಿಯಾಣದಲ್ಲಿಯೂ ಮಳೆಯ ಅಬ್ಬರ ಮುಂದುವರೆದಿದೆ. ಗುರುಗ್ರಾಮ್‌ನ ವಿವಿಧ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಸ್ಥಗಿತಗೊಂಡಿದೆ. ನಗರದ ಎಂ.ಜಿ.ರಸ್ತೆ, ಗಾಲ್ಫ್ ಕೋರ್ಸ್ ರಸ್ತೆ, ಸೋಹ್ನಾ ರಸ್ತೆಗಳು ಮಳೆ ನೀರಿನಲ್ಲಿ ಮುಳುಗಿವೆ.

ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಮಳೆ, ಗಾಳಿ ಜೋರಾಗಿದೆ. ಡೆಹ್ರಾಡೂನ್‌ನ ಕ್ಲಾಕ್ ಟವರ್ ಮತ್ತು ರಾಜ್‌ಪುರ ರಸ್ತೆಗಳು ಮಳೆ ನೀರಿನಿಂದ ತೊಯ್ದು ಹೋಗಿರುವುದನ್ನು ಕಾಣಬಹುದು.

Last Updated : May 23, 2022, 10:10 AM IST

ABOUT THE AUTHOR

...view details