ಹೈದರಾಬಾದ್: ಎಲ್ಲಾ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ನಂತರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜನರ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸಿದ್ದಾರೆ. ಈ ನಷ್ಟದಿಂದ ಕಾಂಗ್ರೆಸ್ ಪಾಠ ಕಲಿತು, ದೇಶದ ಜನರ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ ಹಾಗೆ ಜನರ ಆದೇಶವನ್ನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿಗೆ ಗೆಲುವು, ಸಿಎಂಗೆ ಸೋಲು! ದೇವಭೂಮಿಯಲ್ಲಿ ಮರುಕಳಿಸಿದ ವಿಚಿತ್ರ ಫಲಿತಾಂಶ!
“ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಜನಾದೇಶದಿಂದ ಗೆದ್ದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು" ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
ರಾಜಕೀಯ ವೀಕ್ಷಕರು ಕಾಂಗ್ರೆಸ್ ಪಕ್ಷದ ಸೋಲನ್ನು ದೊಡ್ಡ ಹಿನ್ನಡೆ ಎಂದು ಬಣ್ಣಿಸಿದ್ದಾರೆ. ಇದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬ್ರಾಂಡ್ ಮೌಲ್ಯವನ್ನು ಕಡಿಮೆಗೊಳಿಸಬಹುದು ಎಂದು ಹೇಳಲಾಗುತ್ತಿದೆ.