ಅಹಮದಾಬಾದ್:ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಕಾಂಗ್ರೆಸ್ ನಾಯಕ ರಘು ಶರ್ಮಾ ಎಐಸಿಸಿ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಇದುವರೆಗೆ ಕೇವಲ 16 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 2022 ರಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಬಾರಿಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷವು (ಎಎಪಿ) ಸುಮಾರು ಶೇ 13 ಮತ ಪಡೆದಿದ್ದು, ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಕೇವಲ ಶೇ 27ಕ್ಕೆ ಕುಸಿದಿದೆ.
ಬೆಳಗ್ಗೆ ಮತಗಳ ಎಣಿಕೆ ಆರಂಭವಾದಾಗ ದಿನ ಕಳೆದಂತೆ ಕಾಂಗ್ರೆಸ್ ಪರವಾಗಿ ಆಶ್ಚರ್ಯಕರ ಫಲಿತಾಂಶಗಳು ಬರಲಿವೆ ಎಂದು ರಘು ಶರ್ಮಾ ಹೇಳಿದ್ದು, ಆಶಾಭಾವನೆ ವ್ಯಕ್ತಪಡಿಸಿದ್ದರು. ಆದರೆ ಮಧ್ಯಾಹ್ನವಾದಂತೆ ಕಾಂಗ್ರೆಸ್ ಕೇವಲ 16 ಸ್ಥಾನಗಳಿಗೆ ಸೀಮಿತವಾಗಿದ್ದು, 182 ಸ್ಥಾನಬಲದ ಗುಜರಾತ್ ವಿಧಾನಸಭೆಯಲ್ಲಿ ಹೀನಾಯ ಸ್ಥಿತಿಗೆ ಬಂದಿದೆ.