ಬುಲಂದ್‌ಶಹರ್ (ಉತ್ತರ ಪ್ರದೇಶ):ನಗರದಲ್ಲಿ ಎದೇ ಝಲ್ ಎನಿಸುವ ಘಟನೆಯೊಂದು ನಡೆದಿದೆ. ಕ್ರೂರಿ ವ್ಯಕ್ತಿಯೊಬ್ಬ ತನ್ನ ಹೆಂಡ್ತಿ ಮತ್ತು ಮೂವರು ಮಕ್ಕಳ ಮೇಲೆ ಅಮಾನುಷವಾಗಿ ಸುತ್ತಿಗೆಯಿಂದ ಹಲ್ಲೆ ಮಾಡಿದ್ದಾನೆ.
ಸುತ್ತಿಗೆಯಿಂದ ಪತ್ನಿ, ಮಕ್ಕಳನ್ನು ಹೊಡೆದು - ಹೊಡೆದು ಕೊಂದ ಕ್ರೂರಿ! - ಸುತ್ತಿಗೆ ಹಿಂದ ಹೊಡೆದು ಪತ್ನಿ ಮಕ್ಕಳ ಕೊಲೆ
ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಪತ್ನಿ ಮತ್ತು ಮಕ್ಕಳನ್ನು ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಶಿಕಾರ್‌ಪುರದ ಬಾರಖಂಬಾ ಅಂಬೇಡ್ಕರ್ ನಗರದಲ್ಲಿ ಭೀಕರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡ್ತಿ ಮತ್ತು ಮೂವರು ಮಕ್ಕಳ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಪರಿಣಾಮ ಹೆಂಡ್ತಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.