ಅಮೃತಸರ್(ಪಂಜಾಬ್) :ಕಟ್ಟಿಕೊಂಡ ಹೆಂಡತಿ, ಅತ್ತೆ ಹಾಗೂ ಮಾವನ ಮೇಲೆ ವ್ಯಕ್ತಿಯೋರ್ವ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಪಂಜಾಬ್ನ ಅಮೃತಸರದ ಶಹೀದ್ ಉಧಮ್ ಸಿಂಗ್ ನಗರದಲ್ಲಿ ಈ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ಪತ್ನಿ ಸಿಮ್ರಾನ್ ಹಾಗೂ ಆಕೆಯ ಗಂಡನ ಮಧ್ಯೆ ಕಳೆದ ಕೆಲ ದಿನಗಳಿಂದ ಹಣಕಾಸಿನ ವಿಚಾರಕ್ಕಾಗಿ ಜಗಳ ನಡೆಯುತ್ತಿತ್ತು. ಹೀಗಾಗಿ, ಗಂಡನಿಂದ ದೂರವಾಗಿದ್ದ ಸಿಮ್ರಾನ್ ಪೋಷಕರೊಂದಿಗೆ ಉಳಿದುಕೊಂಡು ಜೀವನ ನಡೆಸುತ್ತಿದ್ದಳು. ಕೊಲೆ ಮಾಡುವ ಉದ್ದೇಶದಿಂದಲೇ ಅವರನ್ನ ಕರೆಯಿಸಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.