ಇಂದೋರ್ (ಮಧ್ಯಪ್ರದೇಶ):ಎಂಐಜಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಂತ್ರಸ್ತೆಯೊಬ್ಬರು, ನನ್ನ ಪತಿ ತ್ರಿವಳಿ ತಲಾಖ್ ನೀಡಿ ಮನೆಯಿಂದ ಹೊರಹಾಕಿದ್ದಾರೆ ಎಂದು ಪೊಲೀಸ್ ಆಯುಕ್ತ ಹರಿ ನಾರಾಯಣಚಾರಿ ಮಿಶ್ರಾ ಅವರಿಗೆ ದೂರು ನೀಡಿದ್ದಾರೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಎಂಐಜಿ ಪೊಲೀಸರಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಸಂತ್ರಸ್ತೆ ಎಂಐಜಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದು, ಶಬ್ಬೀರ್ ಖಾನ್ ಅವರನ್ನು ಸುಮಾರು 8 ರಿಂದ 10 ವರ್ಷಗಳ ಹಿಂದೆ ಮದುವೆಯಾಗಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಮದುವೆಯಾದ ಕೆಲವು ವರ್ಷಗಳ ನಂತರ, ಆಕೆಯ ಹೆಸರಿನಲ್ಲಿದ್ದ ಮನೆಯನ್ನು ಆತನ ಹೆಸರಿಗೆ ನೋಂದಣಿ ಮಾಡುವಂತೆ ಒತ್ತಾಯಿಸುತ್ತಿದ್ದ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಸುಮಾರು 4 ತಿಂಗಳ ಹಿಂದೆ, ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಅತ್ತೆ ಮನೆಯನ್ನು ತೊರೆದು ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು.