ಬಾಗಲ್ಪುರ್(ಬಿಹಾರ):ವರದಕ್ಷಿಣೆ ಕಿರುಕುಳ ನೀಡಿರುವ ಗಂಡನೊಬ್ಬ ಪತ್ನಿ ಹಾಗೂ ಆರು ತಿಂಗಳ ಮಗುವಿನ ಕೊಲೆ ಮಾಡಿರುವ ಘಟನೆ ಬಿಹಾರದ ಬಾಗಲ್ಪುರ್ದಲ್ಲಿ ನಡೆದಿದ್ದು, ಘಟನೆ ಬಳಿಕ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಪತಿ ಸುನೀಲ್ ತನ್ನಿಬ್ಬರು ಸ್ನೇಹಿತರೊಂದಿಗೆ ಸೇರಿ ಹೆಂಡತಿ ಹಾಗೂ 6 ತಿಂಗಳ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಲ್ಲರೂ ಸ್ಥಳದಿಂದ ಪರಾರಿಯಾಗಿದ್ದರು. ಆದರೆ, ಕಾರ್ಯಪ್ರವೃತ್ತರಾದ ಪೊಲೀಸರು ಈಗಾಗಲೇ ಆತನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದರ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಮೃತ ಮಹಿಳೆಯ ತಂದೆ, ಕಳೆದ ಕೆಲ ವರ್ಷಗಳಿಂದ ವರದಕ್ಷಿಣೆ ವಿಚಾರವಾಗಿ ಕಿರುಕುಳ ನೀಡುತ್ತಿದ್ದರೂ ಎಂದಿದ್ದಾರೆ.