ಕರ್ನಾಟಕ

karnataka

ETV Bharat / bharat

IBPS Recruitment: ಕ್ಲರ್ಕ್​ ಹುದ್ದೆಗಳಿಗೆ ಐಬಿಪಿಎಸ್‌ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಐಬಿಪಿಎಸ್‌ ಪ್ರತಿ ರಾಜ್ಯವಾರು ಹುದ್ದೆಗಳನ್ನು ಹಂಚಿಕೆ ಮಾಡಿದ್ದು, ಇದರನುಸಾರ ಕರ್ನಾಟಕಕ್ಕೆ 88 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

IBPS Recruitment for 4045 clerk post Application Date extended to July 28
IBPS Recruitment for 4045 clerk post Application Date extended to July 28

By

Published : Jul 24, 2023, 11:42 AM IST

ಪಂಜಾಬ್​ ನ್ಯಾಷನಲ್​ ಬ್ಯಾಂಕ್​, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಪಂಜಾಬ್​​ ಮತ್ತು ಸಿಂಧ್​ ಬ್ಯಾಂಕ್​ ಮತ್ತು ಬ್ಯಾಂಕ್​ ಆಫ್​ ಇಂಡಿಯಾ ಸೇರಿದಂತೆ ದೇಶದ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್​ ಹುದ್ದೆಗಳ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (ಐಬಿಪಿಎಸ್‌) ಅರ್ಜಿ ಆಹ್ವಾನಿಸಿದೆ. ಪ್ರತಿ ರಾಜ್ಯವಾರು ಹುದ್ದೆಗಳ ಹಂಚಿಕೆ ಮಾಡಿದ್ದು, ಇದರನುಸಾರ ಕರ್ನಾಟಕಕ್ಕೆ 88 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಕಾರ್ಯನಿರ್ವಹಿಸುವ ಇಚ್ಛೆ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ದೇಶದ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಒಟ್ಟು 4,045 ಕ್ಲರ್ಕ್​ ಹುದ್ದೆಗಳಿಗೆ ದೇಶಾದ್ಯಂತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ಪ್ರಮುಖವಾಗಿ ನಾಲ್ಕು ಬ್ಯಾಂಕ್​ಗಳಲ್ಲಿ 88 ಹುದ್ದೆಗಳ ನೇಮಕಾತಿ ನಡೆಯಲಿದೆ. ಬ್ಯಾಂಕ್​ ಆಫ್​ ಇಂಡಿಯಾಗೆ 3, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾಗೆ 61, ಪಂಜಾಬ್​ ಮತ್ತು ಸಿಂಧ್​​ ಬ್ಯಾಂಕ್​ನಲ್ಲಿ 9 ಹಾಗೂ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಲ್ಲಿ 15 ಹುದ್ದೆಗಳಿವೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಆಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ದಿನಾಂಕ ವಿಸ್ತರಣೆ ಅಧಿಸೂಚನೆ

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರ್ಣಗೊಳಿಸಿದ್ದು, ಗರಿಷ್ಠ 28 ವರ್ಷ ಆಗಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ ಹೇಗೆ?: ಅಭ್ಯರ್ಥಿಗಳನ್ನು ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲ ಹಂತ ಪ್ರಿಲಿಮನರಿ ಪರೀಕ್ಷೆ, ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ಮತ್ತು ಅಂತಿಮವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪ.ಜಾ, ಪ.ಪಂ ಮತ್ತು ವಿಶೇಷಚೇತನ, ನಿವೃತ್ತ ಸೇವಾಧಿಕಾರಿಗಳಿಗೆ 175 ರೂ ಅರ್ಜಿ ಶುಲ್ಕ ಮತ್ತು ಇತರೆ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸರಿಯಾಗಿ ಪರಿಶೀಲಿಸಿ ಮುಂದುವರೆಯಬೇಕು. ಅರ್ಜಿ ಸಲ್ಲಿಕೆ ಜುಲೈ 1ರಿಂದ ಆರಂಭವಾಗಿದ್ದು, ಜುಲೈ 21 ಕಡೆಯ ದಿನ. ಆದರೆ, ಈ ದಿನವನ್ನು ಜುಲೈ 28ರವರೆಗೆ ವಿಸ್ತರಿಸಲಾಗಿದೆ. ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು ibps.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಹೆಚ್ಚಿನ ಮಾಹಿತಿಯನ್ನು https://ibpsonline.ibps.in/crpcl13jun23/ ಜಾಲತಾಣದಿಂದ ಪಡೆಯಬಹುದು.

ಇದನ್ನೂ ಓದಿ: SSC Sub Inspector Recruitment: 1876 ಸಬ್​ ಇನ್ಸ್​ಪೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನ

ABOUT THE AUTHOR

...view details