ನವದೆಹಲಿ: ಇನ್ಮುಂದೆ ನೀವು ಕೊರೊನಾ ವೈರಸ್ನ ಹೊಸ ರೂಪಾಂತರವಾದ ಒಮಿಕ್ರಾನ್ ಪತ್ತೆ ಹಚ್ಚಲು ವಾರಗಟ್ಟಲೆ ಕಾಯಬೇಕಿಲ್ಲ. ಕೇವಲ ಎರಡೇ ಗಂಟೆಯಲ್ಲಿ ಫಲಿತಾಂಶ ನೀಡುವ ಕಿಟ್ವೊಂದನ್ನ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಭಿವೃದ್ಧಿಪಡಿಸಿದೆ.
ದಕ್ಷಿಣಾ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ಇದೀಗ ಪ್ರಪಂಚದ 90ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹರಡಿದೆ. ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಚಂಡೀಗಢ, ಪಶ್ಚಿಮ ಬಂಗಾಳದಲ್ಲಿ ಸೇರಿ ಭಾರತದಾದ್ಯಂತ 170ಕ್ಕೂ ಅಧಿಕ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.