ಪುಣೆ (ಮಹಾರಾಷ್ಟ್ರ): ದೇಶದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಕಡಿಮೆಯಾಗುತ್ತಿರುವ ಬೆನ್ನಲ್ಲೇ ವೈರಸ್ನ ಡೆಲ್ಟಾ ಪ್ಲಸ್ ರೂಪಾಂತರ ಭೀತಿ ಹುಟ್ಟಿಸುತ್ತಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಈ ಬಗ್ಗೆ ಸೂಕ್ತ ಅಧ್ಯಯನ ನಡೆಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ) ಮುಂದಾಗಿದೆ.
ಭಾರತದಲ್ಲಿ ಲಭ್ಯವಿರುವ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳು ಡೆಲ್ಟಾ ಪ್ಲಸ್ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿದೆಯೇ ಇಲ್ಲವೇ ಎಂಬುದರ ಕುರಿತು ಅಧ್ಯಯನ ಗಮನಹರಿಸಲಿದೆ. ಇದಕ್ಕಾಗಿ ಈಗಾಗಲೇ ಲಸಿಕೆ ಪಡೆದ ಜನರಲ್ಲಿ ಪ್ರತಿಕಾಯಗಳ ತಟಸ್ಥೀಕರಣವನ್ನು ಸೂಕ್ಷ್ಮವಾಗಿ ತಿಳಿಯಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.