ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆಗೆ ಇಡೀ ಶಿಕ್ಷಣ ಕ್ಷೇತ್ರವೇ ಬೆಚ್ಚಿಬಿದ್ದಿದೆ. ಈಗ ಮಕ್ಕಳ ಆರೋಗ್ಯ ದೃಷ್ಠಿಯಿಂದ ಮುಂದಿನ ತಿಂಗಳು ನಡೆಯಬೇಕಿದ್ದ ಐಸಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಬೋಧನಾ ಸಿಬ್ಬಂದಿಯ ಸುರಕ್ಷತೆಗೆ ನಮ್ಮ ಪ್ರಮುಖ ಆದ್ಯತೆ. ಹಾಗಾಗಿ, 10ನೇ ತರಗತಿ ಪರಿಕ್ಷೆ ರದ್ದುಗೊಳಿಸಲಾಗಿದೆ. 12 ನೇ ತರಗತಿಯ ಪರೀಕ್ಷೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಐಸಿಎಸ್‌ಸಿ ಸುತ್ತೋಲೆಯಲ್ಲಿ ತಿಳಿಸಿದೆ.