ನವದೆಹಲಿ: ದೇಶದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿರುವ ಕಾರಣ ಇದೀಗ ಐಸಿಎಸ್ಇ 10 ಹಾಗೂ 12ನೇ ತರಗತಿ ಪರೀಕ್ಷೆ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಹಾಕಲಾಗಿದೆ.
ನಿಲ್ಲದ ಕೋವಿಡ್ ಭೀತಿ: ಐಸಿಎಸ್ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ - ಐಸಿಎಸ್ಇ ಪರೀಕ್ಷೆ ಮುಂದೂಡಿಕೆ
ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇದೀಗ ಐಸಿಎಸ್ಇ ಪರೀಕ್ಷೆ ಮುಂದೂಡಿಕೆ ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ.
ಐಸಿಎಸ್ಇ ಬೋರ್ಡ್ ಇದರ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಹೊಸ ದಿನಾಂಕ ಜೂನ್ ತಿಂಗಳ ಮೊದಲ ವಾರದಲ್ಲಿ ಹೊರಡಿಸಲಾಗುವುದು ಎಂದು ತಿಳಿಸಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗದೇ ಇರುವ ಆಯ್ಕೆ ನೀಡಲಾಗುವುದು ಎಂದು ತಿಳಿಸಿರುವ ಬೋರ್ಡ್, ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳನ್ನ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಪಾಸ್ ಮಾಡಲಾಗುವುದು ಎಂದು ಹೇಳಿದೆ.
ಸಿಬಿಎಸ್ಇ ಈಗಾಗಲೇ 10ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ಧು ಮಾಡಿದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ ಮಾಡಿದೆ. ಇದರ ಬೆನ್ನಲ್ಲೇ ಐಸಿಎಸ್ಐ ಈ ಮಹತ್ವದ ನಿರ್ಧಾರ ಹೊರಹಾಕಿದೆ. ದೇಶದಲ್ಲಿ ಪ್ರತಿದಿನ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ವಿವಿಧ ರಾಜ್ಯಗಳಲ್ಲಿ 10ನೇ ತರಗತಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡಲಾಗಿದೆ.