ಕರ್ನಾಟಕ

karnataka

ETV Bharat / bharat

ಐಡಿಬಿಐನ 600 ಜ್ಯೂನಿಯರ್​ ಅಸಿಸ್ಟಂಟ್​ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ - ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್

IDBI Recruitment: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

IDBI Invited Application For junior assistant post
IDBI Invited Application For junior assistant post

By ETV Bharat Karnataka Team

Published : Sep 15, 2023, 1:38 PM IST

ಇಂಡಸ್ಟ್ರೀಯಲ್​ ಡೆವಲ್ಮೆಂಟ್​​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ) 600 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಐಡಿಬಿಐ ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ನೇಮಕಾತಿಗೆ ಮುಂದಾಗಿದೆ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ. ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ..

ಹುದ್ದೆ ವಿವರ: ಐಡಿಬಿಐನ ವಿವಿಧ ವಲಯದಲ್ಲಿ ಖಾಲಿ ಇರುವ ಒಟ್ಟು 600 ಜ್ಯೂನಿಯರ್​ ಅಸಿಸ್ಟಂಟ್​ ಮ್ಯಾನೇಜರ್​ ಹುದ್ದೆ ಭರ್ತಿ ಮಾಡಲಾಗುವುದು.

ವಿದ್ಯಾರ್ಹತೆ:ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಕಂಪ್ಯೂಟರ್​ ಜ್ಞಾನ ಹೊಂದಿರುವುದು ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸುವ ರಾಜ್ಯಗಳ ಪ್ರಾದೇಶಿಕ ಭಾಷೆಗಳ ಮೇಲೆ ಹಿಡಿತ ಹೊಂದಿರಬೇಕಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಠ 20 ವರ್ಷ ಆಗಿದ್ದು, ಗರಿಷ್ಠ 25 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 200 ರೂ ಮತ್ತು ಇತರೆ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ವೇತನ ಸೌಲಭ್ಯ 6,14,000ರಿಂದ 6,50,000 ರೂ.ವರೆಗೂ ಇರಲಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೆಪ್ಟೆಂಬರ್​ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ. ಈ ಹುದ್ದೆ ಅಕ್ಟೋಬರ್​ 20ರಂದು ಆನ್​ಲೈನ್​ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ತಾತ್ಕಾಲಿಕ ದಿನಾಂಕ ಘೋಷಣೆ ಮಾಡಲಾಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು idbibank.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ:SSC recruitment: ಕ್ಲರಿಕಲ್​ ಪೋಸ್ಟ್​​ಗಳಿಗೆ ಅರ್ಜಿ ಆಹ್ವಾನಿಸಿದ ಎಸ್​ಎಸ್​ಸಿ

ABOUT THE AUTHOR

...view details