ಜಮ್ಮು:ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಕಂಡು ಬಂದು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಭದ್ರತಾ ಪಡೆಗಳು ಸ್ಫೋಟಕವನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸುವ ಮೂಲಕ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.
ರಾಜೌರಿ-ಗುರ್ದನ್ ರಸ್ತೆಯ ಗುರ್ದನ್ ಚಾವಾ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಚಲನವಲನ ಕಂಡು ಬಂದಿತ್ತು. ಈ ಬಗ್ಗೆ ಜನರು ಮಾಹಿತಿ ನೀಡಿದ್ದಾರೆ. ಸ್ಪೆಷಲ್ ಆಪರೇಷನ್ ಗ್ರೂಪ್ ಆಫ್ ಪೊಲೀಸ್ ಮತ್ತು ಸೇನಾ ಪಡೆಗಳು ಆ ಸ್ಥಳದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ.