ಚೆನ್ನೈ:ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದರೆ ನಮ್ಮ ಸರ್ಕಾರವು ಮೊದಲ 100 ದಿನಗಳನ್ನು ಜನರ ಸಮಸ್ಯೆಗಳನ್ನು ಪರಿಹರಿಸಲು ಮೀಸಲಿಡುತ್ತೇವೆ ಎಂದು ಡಿಎಂಕೆ ಮುಖ್ಯಸ್ಥ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಎಂ ಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ.
ಜನವರಿ 29 ರಿಂದ ರಾಜ್ಯದ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ 30 ದಿನಗಳ ಭೇಟಿ ನೀಡಲಿರುವುದಾಗಿ ಸ್ಟಾಲಿನ್ ತಿಳಿಸಿದ್ದು, ಜನರ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಮೊದಲ ಕೆಲಸ ಎಂದು ಹೇಳಿದ್ದಾರೆ.