ನವದೆಹಲಿ: ದೇಶದ ಆಹಾರ ಭದ್ರತೆಯನ್ನು ನಿರ್ವಹಿಸಬೇಕಾದರೆ, ಕಳೆದ ವರ್ಷ ಜಾರಿಗೊಳಿಸಿದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ರೈತರ ಗೌರವವನ್ನು ಪುನಃಸ್ಥಾಪಿಸಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.
ರೈತರು ಬೆಳೆಗಳನ್ನು ಬೆಳೆದು, ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಆಹಾರ ಧಾನ್ಯಗಳು ಕಡಿಮೆಯಾಗಲು ಅವಕಾಶ ನೀಡುವುದಿಲ್ಲ. ಎಂದು ಪ್ರಿಯಾಂಕಾ ಟ್ವೀಟ್ ಮೂಲಕ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಆಹಾರ ಭದ್ರತಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಪ್ರಿಯಾಂಕಾ ಗಾಂಧಿ ವಾದ್ರಾ ಈ ಟ್ವೀಟ್ ಮಾಡಿದ್ದಾರೆ.
'ಮೋದಿ ಜಿ ಕಪ್ಪು ಕೃಷಿ ಕಾನೂನುಗಳನ್ನು ತಂದಿದ್ದು, ಇದು ದೇಶದ ಶಕ್ತಿಗೆ ಬೆದರಿಕೆಯಾಗಿದೆ. ದೇಶದ ಆಹಾರ ಭದ್ರತೆಯನ್ನು ನಿರ್ವಹಿಸಬೇಕಾದರೆ, ಕಳೆದ ವರ್ಷ ಜಾರಿಗೊಳಿಸಿದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ರೈತರ ಗೌರವ ಪುನಃಸ್ಥಾಪಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.
ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ನವೆಂಬರ್ನಿಂದ ದೆಹಲಿ ಗಡಿಯಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ, 200 ರೈತರ ಒಂದು ಸಣ್ಣ ಗುಂಪು ಈಗ ಕೇಂದ್ರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.