ನವದೆಹಲಿ/ಬೆಂಗಳೂರು: ಭಾರತದ ಪ್ರಮುಖ ಸ್ನಾತಕೋತ್ತರ, ಸಂಶೋಧನೆ ಹಾಗೂ ಉಚ್ಚ ಶಿಕ್ಷಣ ಸಂಸ್ಥೆಯಾಗಿ ಹೆಸರುವಾಸಿಯಾಗಿರುವ ಭಾರತೀಯ ವಿಜ್ಞಾನ ಸಂಸ್ಥೆ (IISc)ಯು ಅತ್ಯುತ್ತಮ ಸಂಶೋಧನಾ ಸಂಸ್ಥೆ ಎಂಬ ಬಿರುದಿಗೆ ಪಾತ್ರವಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯ ಇಂದು 2021ನೇ ಸಾಲಿನ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಚೌಕಟ್ಟು (NIRF) ಪ್ರಕಟಿಸಿದ್ದು, ಎಂಟು ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (IIT) ಹಾಗೂ ಎರಡು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಳು(NIT) ದೇಶದ ಅಗ್ರ ಹತ್ತು ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಸ್ಥಾನ ಪಡೆದಿವೆ.
ಈ ರ್ಯಾಂಕಿಂಗ್ನಲ್ಲಿ ಬೆಂಗಳೂರಿನಲ್ಲಿರುವ ಭಾರತದ ಏಕೈಕ ಭಾರತೀಯ ವಿಜ್ಞಾನ ಸಂಸ್ಥೆಯು ಅತ್ಯುತ್ತಮ ಸಂಶೋಧನಾ ಸಂಸ್ಥೆ ಎಂಬ ಸ್ಥಾನ ಪಡೆದಿದ್ದು, ಮದ್ರಾಸ್ನ ಭಾರತೀಯ ತಂತ್ರಜ್ಞಾನ ಸಂಸ್ಥೆಯು ದೇಶದ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.