ಪಾಟ್ನಾ :ಕೊರೊನಾ ವೈರಸ್ ಕೊಲ್ಲುವ ಯಂತ್ರವೊಂದನ್ನು ಇಲ್ಲಿನ IIT ಅಭಿವೃದ್ಧಿಪಡಿಸಿದೆ. ಮೊದಲ ಬಾರಿಗೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಪಾಟ್ನಾ ಈ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಇದು ಕೊರೊನಾ ವೈರಸ್ ಅನ್ನು ನಾಶ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ನಂಬಲಾಗಿದೆ.
ಅನೇಕ ಜೀವಗಳನ್ನು ಬಲಿ ತೆಗೆದುಕೊಂಡ ಮಾರಣಾಂತಿಕ ವೈರಸ್ ವಿರುದ್ಧ ಹೋರಾಡುವ ಉದ್ದೇಶದಿಂದ ಐಐಟಿ ಪಾಟ್ನಾದ ಇನ್‌ಕ್ಯುಬೇಶನ್ ಸೆಂಟರ್‌ನಲ್ಲಿ ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ.
ಈ ಯಂತ್ರವು ಜನರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಇದನ್ನು ಪಾಟ್ನಾದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ನಲ್ಲಿ ಪ್ರಯೋಗಕ್ಕೆ ಇಡಲಾಗಿದೆ.