ಕಡಲೂರು (ತಮಿಳುನಾಡು): 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿದ್ಯಾರ್ಥಿನಿಯೋರ್ವಳು ಶಾಲಾ ಶೌಚಾಲಯದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಮಿಳುನಾಡಿನ ಕಡಲೂರು ಸಮೀಪದ ಭುವನಗಿರಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಸಂಪೂರ್ಣ ವಿವರ: ಭುವನಗಿರಿಯಲ್ಲಿರುವ ಹೈಯರ್ ಸೆಕೆಂಡರಿ ಶಾಲೆಯಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 10ನೇ ತರಗತಿಯ ವಿದ್ಯಾರ್ಥಿ ಹಾಗೂ 11ನೇ ತರಗತಿ ವಿದ್ಯಾರ್ಥಿನಿ ನಡುವೆ ಅಕ್ರಮ ಸಂಬಂಧವಿತ್ತು. ಇಂದು ಬೆಳಗ್ಗೆ ಬಾಲಕಿ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತದನಂತರ ಅದನ್ನು ಶಾಲೆಯ ಕಾಂಪೌಂಡ್ ಪಕ್ಕದ ಪೊದೆಗೆ ಎಸೆದಿದ್ದಾಳೆ. ಇದನ್ನು ನೋಡಿರುವ ಇತರೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ಘಟನಾ ಸ್ಥಳಕ್ಕೆ ಭುವನಗಿರಿ ಇನ್ಸ್ಪೆಕ್ಟರ್ ಸರಸ್ವತಿ ಹಾಗೂ ಸಬ್ ಇನ್ಸ್ಪೆಕ್ಟರ್ ಸಂತೋಷ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.