ಕರ್ನಾಟಕ

karnataka

ETV Bharat / bharat

ಕಾಂಗ್ರೆಸ್​​ ಪಕ್ಷಕ್ಕೆ ನಾನೇ ಪೂರ್ಣಾವಧಿ ಅಧ್ಯಕ್ಷೆ ಎಂದ ಸೋನಿಯಾ.. 2022ರಲ್ಲಿ ಚುನಾವಣೆ ಸಾಧ್ಯತೆ - G23 ಸಭೆ

ಬರೋಬ್ಬರಿ 1 ವರ್ಷಗಳ ನಂತರ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿ ಸೋನಿಯಾ ಗಾಂಧಿ ಮಾತನಾಡಿದ್ದು, ಈ ವೇಳೆ, ನೀವೆಲ್ಲರೂ ಒಪ್ಪಿಕೊಳ್ಳುವುದಾದರೆ ನಾನೇ ಪಕ್ಷದ ಪೂರ್ಣಾವಧಿ ಅಧ್ಯಕ್ಷೆಯಾಗಿ ಮುಂದುವರೆಯುವೆ ಎಂದು ತಿಳಿಸಿದ್ದಾರೆ..

G23 at CWC meet
G23 at CWC meet

By

Published : Oct 16, 2021, 3:10 PM IST

ನವದೆಹಲಿ :ಕಾಂಗ್ರೆಸ್​​​ ಪಕ್ಷಕ್ಕೆ ನಾನೇ ಪೂರ್ಣಾವಧಿ ಅಧ್ಯಕ್ಷೆಯಾಗಿರುವೆ. ಯಾವುದೇ ಸಮಸ್ಯೆಗಳಿದ್ದರೆ ಮಾಧ್ಯಮಗಳ ಮುಂದೆ ಹೋಗದೇ ನನ್ನ ಹತ್ತಿರ ಬರುವಂತೆ ಸೋನಿಯಾ ಗಾಂಧಿ ಅವರು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಭಾಗಿಯಾದ ಬಳಿಕ ಕಾಂಗ್ರೆಸ್​ ಪಕ್ಷದಿಂದ ಈ ಮಹತ್ವದ ಪ್ರಕಟಣೆ ಹೊರಬಿದ್ದಿದೆ.

ಒಗ್ಗಟ್ಟಿನ ಮಂತ್ರ ಜಪಿಸಿದ ಸೋನಿಯಾ

G23 ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಸೋನಿಯಾ ಗಾಂಧಿ ಅವರು, ಕಾಂಗ್ರೆಸ್​​ ಪಕ್ಷಕ್ಕೆ ಕೆಲ ರಾಜ್ಯಗಳಲ್ಲಿ ಅಧ್ಯಕ್ಷರ ಅನುಪಸ್ಥಿತಿ ಇರುವ ಕಾರಣ ಒಂದಿಷ್ಟು ಗೊಂದಲು ಉದ್ಭವವಾಗುತ್ತಿವೆ. ಆದರೆ, ಅದರ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವ ಅಗತ್ಯವಿಲ್ಲ ಎಂದಿರುವ ಸೋನಿಯಾ, ಸಮಸ್ಯೆಗಳ ಬಗ್ಗೆ ನನ್ನ ಮುಂದೆ ಹೇಳಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕವಾಗಿ ಚರ್ಚೆ ಮಾಡೋಣ. ನಾಲ್ಕು ಕೊಠಡಿಗಳ ಹೊರೆಗೆ ಏನು ಮಾತನಾಡಬೇಕು ಎಂಬುದರ ಬಗ್ಗೆ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧಾರ ಮಾಡೋಣ ಎಂದರು.

ಪಕ್ಷದ ಪುನಶ್ಚೇತನಕ್ಕೆ ಆದ್ಯತೆ

ಕಾಂಗ್ರೆಸ್​​​ ಪಕ್ಷದ ಪ್ರತಿಯೊಬ್ಬರು ಪಕ್ಷದ ಪುನಶ್ಚೇತನ ಬಯಸುತ್ತಾರೆ. ಅದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದಿರುವ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಹಾಗೂ ರಾಹುಲ್​ ಗಾಂಧಿ ಅವರಂತೆ ನಾನು ಪ್ರಧಾನಿ ಜೊತೆ ಮಾತನಾಡಿ, ದೇಶದಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ತಿಳಿಸುವೆ ಎಂದರು.

ಇದನ್ನೂ ಓದಿರಿ:ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಎಲ್ಲರೂ ಒಗ್ಗಟ್ಟಿನಿಂದ, ಶಿಸ್ತಿನಿಂದ ಕೆಲಸ ಮಾಡಿದಾಗ ದೇಶದಲ್ಲಿ ಉದ್ಭವವಾಗಿರುವ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಬಹುದಾಗಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಮೂಲಕ ರೈತರನ್ನ ಹತ್ತಿಕ್ಕುವ ಕೆಲಸ ಮಾಡ್ತಿದೆ. ಅನೇಕ ರೈತರ ಕೊಲೆ ಮಾಡುವ ಮೂಲಕ ಬಿಜೆಪಿ ಮನಸ್ಥಿತಿ ಏನು ಎಂಬುದನ್ನ ತೋರಿಸಿದೆ ಎಂದು ಹರಿಹಾಯ್ದರು.

ದೇಶದ ಸಮಸ್ಯೆಗಳ ಬಗ್ಗೆ ಹೋರಾಟ

ಗಡಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಗಂಭೀರವಾದ ಸಮಸ್ಯೆ ಎದುರಿಸುತ್ತಿದ್ದೇವೆ. ಕಳೆದ ವರ್ಷ ಚೀನಾ ನಮ್ಮ ಭೂಪ್ರದೇಶವನ್ನ ಆಕ್ರಮಿಸಿಕೊಂಡಿದೆ. ಆದರೆ, ಪ್ರಧಾನಿ ಮೋದಿ ಮಾತ್ರ ಮೌನಕ್ಕೆ ಶರಣಾಗಿದ್ದಾರೆ ಎಂದು ಹೇಳಿದರು.

ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ರಾಹುಲ್​ ಗಾಂಧಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಸುಮಾರು 52 ಪ್ರಮುಖ ನಾಯಕರು ಭಾಗಿಯಾಗಿದ್ದರು. ಆದರೆ, ದಿಗ್ವಿಜಯ್ ಸಿಂಗ್ ಹಾಗೂ ಮನಮೋಹನ್​ ಸಿಂಗ್​ ಸೇರಿದಂತೆ ಕೆಲವರು ಗೈರಾಗಿದ್ದರು.

ABOUT THE AUTHOR

...view details