ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಅಪ್ರಾಪ್ತ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಮಾಮ್‌ಯೋರ್ವನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಸಿಂ ರಾಜಾ ಎಂದು ಗುರುತಿಸಲಾಗಿದೆ.
ಆರೋಪಿ ವಾಸಿಂ ರಾಜಾ ಶ್ರೀನಗರದ ನೂರ್‌ಬಾಗ್ ಪ್ರದೇಶದ ನಿವಾಸಿಯಾಗಿದ್ದು, ಆಯಿಷಾ ಮಲಿಕಾಗುನ್ ಮಸೀದಿಯಲ್ಲಿ ಇಮಾಮ್ ಆಗಿ ಕೆಲಸ ಮಾಡುತ್ತಿದ್ದ. ಒಂಬತ್ತು ವರ್ಷದ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಸೆಕ್ಷನ್ 5 ಮತ್ತು 6ರಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಕೊಲೆ: ಆರೋಪಿಗೆ ಮರಣದಂಡನೆ
ಇಲ್ಲಿನ ಮಹಾರಾಜ್ ಗುಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ. ಮೂಲಗಳ ಪ್ರಕಾರ, ಪ್ರಕರಣದಲ್ಲಿ ಆರೋಪ ಸಾಬೀತಾದರೆ 20 ವರ್ಷಗಳವರೆಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಅಥವಾ ಪೋಕ್ಸೋ ಕಾಯ್ದೆಯಡಿ ತಪ್ಪಿತಸ್ಥರೆಂದು ಸಾಬೀತಾದರೆ ಮರಣದಂಡನೆ ಕೂಡ ಪ್ರಕಟವಾಗಬಹುದು.
ಕಳೆದ ವರ್ಷ ಕೂಡ ಇದೇ ರೀತಿಯ ಪ್ರಕರಣ ವರದಿಯಾಗಿತ್ತು. ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. 15 ವರ್ಷದ ಬಾಲಕನ ಸಂತ್ರಸ್ತ ಪೋಷಕರು, ತಮ್ಮ ಮಗನನ್ನು ಆರೋಪಿ ಅಪಹರಿಸಿ ಜಮ್ಮುವಿಗೆ ಕರೆದೊಯ್ದು ಆತನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದ ಪೊಲೀಸರು, ಬುದ್ಗಾಮ್‌ನಲ್ಲಿರುವ ಮಕ್ಕಳ ರಕ್ಷಣಾ ಘಟಕಕ್ಕೆ ಸ್ಥಳಾಂತರ ಮಾಡಿದ್ದರು.
ಮಹಾರಾಷ್ಟ್ರದ ಪ್ರಕರಣ:ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಖಾಸಗಿ ವೈದ್ಯನೋರ್ವ ಪತ್ನಿಯ ಮೇಲೆ ಅಸ್ವಾಭಾವಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಆರೋಪಿ ವೈದ್ಯ ಮತ್ತು ಆತನ ಕುಟುಂಬದ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪತಿ ನನ್ನನ್ನು ನಿಂದಿಸಿ, ಅಸ್ವಾಭಾವಿಕ ದೈಹಿಕ ಸಂಪರ್ಕ ಬೆಳೆಸಿ ನಂತರ ಮನೆಯಿಂದ ಹೊರದಬ್ಬಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಪತಿ ಸೇರಿ ಏಳು ಜನರು ಐಪಿಸಿ ಸೆಕ್ಷನ್ 377, 498 ಎ, 323, 504 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ:ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ, ಮನೆಯಿಂದ ಹೊರದಬ್ಬಿದ ಆರೋಪ .. ವೈದ್ಯನ ವಿರುದ್ಧ ಪತ್ನಿಯಿಂದಲೇ ದೂರು