ಕರ್ನಾಟಕ

karnataka

ETV Bharat / bharat

ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ದೇಶದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

Representative image
ಪ್ರಾತಿನಿಧಿಕ ಚಿತ್ರ

By

Published : May 3, 2023, 8:12 AM IST

ನವದೆಹಲಿ: ಮುಂದಿನ ದಿನಗಳಲ್ಲಿ ಭಾರತದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಲೆಟಿನ್ ತಿಳಿಸಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ/ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕರ್ನಾಟಕದಲ್ಲೂ ಮಳೆ: ಐಎಂಡಿ ತನ್ನ ಹೇಳಿಕೆಯಲ್ಲಿ, "ದಕ್ಷಿಣ ಭಾರತದ ಹಲವು ಪ್ರದೇಶದಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಬಹುದು. ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಪೂರ್ವ ಭಾರತದ ಭಾಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ" ಎಂದು ತಿಳಿಸಿದೆ.

ಇಂದು ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಬಹುದು. ರಾಜ್ಯದ ಬಯಲು ಸೀಮೆ, ತಗ್ಗು ಮತ್ತು ಮಧ್ಯ ಗುಡ್ಡಗಾಡು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಮೇ 6 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಎಲ್ಲಾ 12 ಜಿಲ್ಲೆಗಳ ಹಲವಾರು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಮಂಡಿ ಜಿಲ್ಲೆಯ ಜೋಗಿಂದರ್‌ ನಗರದಲ್ಲಿ ಅತಿ ಹೆಚ್ಚು ಅಂದರೆ 47 ಮಿಮೀ, ಮನಾಲಿಯಲ್ಲಿ 24 ಮಿಮೀ, ಪಚ್ಚಾಡ್‌ನಲ್ಲಿ 23 ಮಿಮೀ, ಸೋಲನ್‌ನಲ್ಲಿ 11.2 ಮಿಮೀ ಹಾಗೂ ಶಿಮ್ಲಾದಲ್ಲಿ 8 ಮಿಮೀ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಇಂದು ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದೆ. ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ 15 ಮಿ.ಮೀ ಮಳೆ ದಾಖಲಾಗಿದೆ. ಮುಂದಿನ ಐದು ದಿನಗಳಲ್ಲಿ ಪಶ್ಚಿಮ ಭಾರತದಲ್ಲಿ ಸಾಧಾರಣ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಮೇ 2 ಮತ್ತು 4 ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ತಿಳಿಸಿದೆ. ಇದಲ್ಲದೇ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಂತಹ ಈಶಾನ್ಯ ಭಾಗಗಳಲ್ಲಿ ಮೇ 2 ರಿಂದ 4 ರ ಅವಧಿಯಲ್ಲಿ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಮುಂದಿನ 5 ದಿನಗಳವರೆಗೆ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದೆ.

ಸೋಮವಾರ(ಮೇ 1) ತಡರಾತ್ರಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದೇಶದ ಹಲವು ಭಾಗಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗಿದೆ. ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹಲವೆಡೆ ಮಳೆ ಸುರಿದಿದೆ. ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಕೆಲವೆಡೆ ಮಳೆಯಾಗಿದೆ.

ದೆಹಲಿಯಲ್ಲಿ ಜಡಿ ಮಳೆ:ಸೋಮವಾರದಂದು ದೆಹಲಿಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಇನ್ನೂ ಎರಡು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಗುಡುಗು ಸಹಿತ ಅಬ್ಬರಿಸಿದ ವರುಣ : ಮಳೆಯಿಂದ ಜನ ಜೀವನ ಅಸ್ತವ್ಯಸ್ತ

ABOUT THE AUTHOR

...view details